Karnataka Election: ಪಿಸ್ತೂಲು ಹಿಡಿದ ಬಿಜೆಪಿ ಅಭ್ಯರ್ಥಿ: ಪ್ರಕರಣ ದಾಖಲಿಸಿ ಎಂದು ಕಾಂಗ್ರೆಸ್ ಆಗ್ರಹ

ಚುನಾವಣೆ ಸಮೀಪವಾಗುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವಿನ ಆರೋಪ ಪ್ರತ್ಯಾರೋಪಗಳ ಭರಾಟೆ ಜೋರಾಗಿದೆ. ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಈಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಮಣಿಕಂಠ ರಾಠೋಡ್ ಪಿಸ್ತೂಲಿನೊಂದಿಗೆ ಫೋಸ್ ಕೊಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದ್ದು, ಕಾಂಗ್ರೆಸ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಭೂಗತ ಪಾತಕಿಯಂತೆ ಕಾಣುತ್ತಿರುವ ಈತ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿಗೆ ಆದರ್ಶವಂತೆ ಎಂದು ವ್ಯಂಗ್ಯವಾಡಿದೆ.

Congress Urges Filing A Case Against Manikanth Rathod After He Posed With A Pistol

"ಗಡೀಪಾರು ಆಗದ್ದೆ ಈತನ ಅರ್ಹತೆ, ಬಡವರ ಅಕ್ಕಿ, ಅಂಗನವಾಡಿ ಮಕ್ಕಳ ಹಾಲಿನ ಪುಡಿ ಕದ್ದದ್ದೇ ಈತನ ಯೋಗ್ಯತೆ" ಎಂದು ಮಣಿಕಂಠ ರಾಠೋಡ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಈತನ ಕೈಗೆ ಶೋಕಿ ಮಾಡಲು ಕೈಗೆ ಪಿಸ್ತೂಲು ಬಂದಿದ್ದು ಹೇಗೆ? ಈ ಬಗ್ಗೆ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮಾಡಬೇಕು ಎಂದು ಕರ್ನಾಟಕ ಚುನಾವಣಾ ಅಧಿಕಾರಿ ಮತ್ತು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ ಮಾಡಿದೆ.

ಕಾಂಗ್ರೆಸ್ ಭದ್ರಕೋಟೆಯಲ್ಲಿ ಮಣಿಕಂಠ ಸ್ಪರ್ಧೆ

ಚಿತ್ತಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಕಾಂಗ್ರೆಸ್‌ನಿಂದ ಇಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಮಾಡಿದ್ದಾರೆ, ಅವರ ವಿರುದ್ಧ ಬಿಜೆಪಿ ಮಣಿಕಂಠ ರಾಠೋಡರನ್ನು ಕಣಕ್ಕಿಳಿಸಿದೆ. ಮಣಿಕಂಠ ರೌಡಿಶೀಟರ್ ಪಟ್ಟಿಯಲ್ಲಿರುವುದನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕ್ಷೇತ್ರದಲ್ಲಿ ಭರ್ಜರಿಯಾಗಿ ಪ್ರಚಾರ ಮಾಡುತ್ತಿದೆ.

ಮಣಿಕಂಠ ರೌಡಿಶೀಟರ್ ಪಟ್ಟಿಯಲ್ಲಿದ್ದ ಕಾರಣ ಅವರನ್ನು ಕಲಬುರಗಿ ಕಮಿಷನರ್ ಆಗಿದ್ದ ವೈ.ಎಸ್. ರವಿಕುಮಾರ್ ಗಡೀಪಾರು ಮಾಡಿದ್ದರು. ರವಿಕುಮಾರ್ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆಮಾಡದ್ದ ಮಣಿಕಂಠ ಇದಕ್ಕೆ ತಡೆಯಾಜ್ಞೆ ತಂದಿದ್ದರು. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಸೇರಿದಂತೆ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+