Get Updates
Get notified of breaking news, exclusive insights, and must-see stories!

ನಾಗರಿಕರ ಸಾವು-ನೋವುಗಳು ಕಾಂಗ್ರೆಸ್‌ಗೆ ರಾಜಕೀಯ ಅಸ್ತ್ರ: ವಿಜಯೇಂದ್ರ

ದೆಹಲಿಯಲ್ಲಿ ಕಾರು ಸ್ಫೋಟದ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಚುನಾವಣೆಗಳು ನಡೆಯುವ ಹೊತ್ತಲ್ಲೇ ಏಕೆ ಬಾಂಬ್‌ ಸ್ಫೋಟ ಸಂಭವಿಸುತ್ತವೆ ಎಂದು ಕೇಳಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಾರವಾಗಿ ತಿರುಗೇಟು ನೀಡಿದ್ದಾರೆ. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ, ಅಸಂವೇದನೀಯ, ಕೀಳು ರಾಜಕೀಯ ಹೇಳಿಕೆಗಳು ಖಂಡನೀಯ ಮಾತ್ರವಲ್ಲ ಆತಂಕಕಾರಿಯೂ ಆಗಿದೆ ಎಂದಿದ್ದಾರೆ.

ದೇಶದ ವಿರುದ್ಧ ನಡೆದಿರಬಹುದಾದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಸೂಕ್ಷ್ಮ ಸಂದರ್ಭದಲ್ಲೂ ಇವರುಗಳು ಕೀಳುಮಟ್ಟದ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ ಹಾಗೂ ದೇಶದ ದೌರ್ಭಾಗ್ಯ ಎಂದು ವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಭದ್ರತೆ, ನಾಗರಿಕರ ಸಾವು-ನೋವುಗಳು, ನಮ್ಮ ಸೈನಿಕರ ತ್ಯಾಗ, ರಾಷ್ಟ್ರೀಯ ಗೌರವಗಳಂತಹ ವಿಷಯಗಳೂ ಕೂಡ ಕೇವಲ ರಾಜಕೀಯ ಅಸ್ತ್ರವಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ ಎಂದು ಕಿಡಿಕಾರಿದ್ದಾರೆ.

Congress Using Citizens Tragedy For Politics BY Vijayendra Siddaramaiah

ಕಾಂಗ್ರೆಸ್‌ನ ರಾಷ್ಟ್ರ ವಿರೋಧಿ ಪರಂಪರೆ

2019ರ ಭೀಕರ ಪುಲ್ವಾಮಾ ದಾಳಿಯ ನಂತರವೂ ಕಾಂಗ್ರೆಸ್‌ ನಾಯಕರು, ಪಾಕಿಸ್ತಾನದ ಪ್ರಚಾರಕ್ಕೆ ಸಹಾಯವಾಗುವ ಹೇಳಿಕೆಗಳನ್ನು ನೀಡಿದ್ದನ್ನು ದೇಶ ಮರೆತಿಲ್ಲ. ಮುಖ್ಯಮಂತ್ರಿಗಳ ಈಗಿನ ಹೇಳಿಕೆ ಕೂಡ ಕಾಂಗ್ರೆಸ್‌ನ ಅದೇ ರಾಷ್ಟ್ರ ವಿರೋಧಿ ಪರಂಪರೆಯ ಮುಂದುವರಿಕೆಯಾಗಿದೆ. ದೇಶದ ಸಾರ್ವಭೌಮತೆ ಮತ್ತು ಭದ್ರತೆಗೆ ಧಕ್ಕೆ ಬಂದಾಗ ಇಡೀ ದೇಶ ಒಗ್ಗಟ್ಟಿನಿಂದ ನಿಲ್ಲಬೇಕು. ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಕಾಂಗ್ರೆಸ್ ನಾಯಕರ ಧೋರಣೆ ಅವರ ಅಸಲಿಯತ್ತನ್ನು ಬಯಲು ಮಾಡಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಯುಪಿಎ ಅವಧಿಯಲ್ಲಿ (2004-2014) ಮುಂಬೈ ದಾಳಿ ಸೇರಿದಂತೆ ದೇಶದಲ್ಲಿ 45ಕ್ಕೂ ಅಧಿಕ ಬಾಂಬ್ ಸ್ಫೋಟ, ಉಗ್ರ ಕೃತ್ಯಗಳು ನಡೆದು ಸಾವಿರಾರು ಮಂದಿ ಸಾವನ್ನಪ್ಪಿದಾಗ, ಆಗಿನ ಅಸಮರ್ಥ ಕೇಂದ್ರ ಸರ್ಕಾರ ಪ್ರತಿಕ್ರಮಗಳೇನನ್ನೂ ತೆಗೆದುಕೊಳ್ಳದೆ ಇದ್ದಾಗಲೂ ದೇಶದ ಭದ್ರತೆ ವಿಷಯದಲ್ಲಿ ದೇಶ ಒಂದಾಗಿರಬೇಕೆಂದು ಆಗ ಪ್ರತಿಪಕ್ಷ ರಾಜಕೀಯ ನಡೆಸಲಿಲ್ಲ ಎಂದಿದ್ದಾರೆ.

Congress Using Citizens Tragedy For Politics BY Vijayendra Siddaramaiah

ಸಿಎಂ ಹೇಳಿಕೆಯನ್ನು ಕೂಡಲೇ ಹಿಂಪಡೆಯಲಿ

ರಾಜ್ಯದ ಆಡಳಿತ ವೈಫಲ್ಯ, ಶೂನ್ಯ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಮೇಲಿನ ಆರೋಪಗಳಿಗೆ ಉತ್ತರದಾಯಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ನಾಯಕರು, ಜನರ ಗಮನ ಬೇರೆಡೆ ಸೆಳೆಯಲು ಹೀಗೆ ಅಗ್ಗದ ರಾಜಕೀಯ ತಂತ್ರವನ್ನು ಅನುಸರಿಸುತ್ತಿರುವುದನ್ನು ನೋಡಿ ಜನರೇ ಛೀಮಾರಿ ಹಾಕುತ್ತಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್‌ನ ದೇಶ-ವಿರೋಧಿ, ಸಂವೇದನಾರಹಿತ, ಕೀಳು ರಾಜಕೀಯಕ್ಕೆ ಬಿಹಾರದ ಜನತೆ ಉತ್ತರ ನೀಡುತ್ತಿರುವಂತೆಯೇ ರಾಜ್ಯದ ಜನರೂ ಕೂಡ ತಕ್ಕ ಉತ್ತರ ನೀಡಲಿದ್ದಾರೆ. ಇದು ಪಕ್ಷ ರಾಜಕಾರಣದ ಮಾತಲ್ಲ, ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ 'ದೇಶ ಮೊದಲು, ಉಳಿದದ್ದೆಲ್ಲವೂ ನಂತರ ಎಂದು ಕಿವಿಮಾತು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+