Get Updates
Get notified of breaking news, exclusive insights, and must-see stories!

ಪರಿಷತ್ ಸಭಾಪತಿ ಶಂಕರಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ತಂತ್ರ

ಸದ್ಯದ ಮಟ್ಟಿಗೆ ನಿರಾಯಾಸವಾಗಿ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಗಿಟ್ಟಿಸಬಹುದಾಗಿದೆ. ಹೀಗಾಗಿ ಬಜೆಟ್ ಅಧಿವೇಶನದಲ್ಲಿ ಶಂಕರಮೂರ್ತಿ ಸಭಾಪತಿ ಸ್ಥಾನದಿಂದ ಕೆಳಗಿಳಿಯಬೇಕಾಗಿ ಬರಬಹುದು.

ಬೆಂಗಳೂರು, ಮೇ 21: ವಿಧಾನ ಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ. ಪರಿಷತ್ ನಲ್ಲಿ ಇಲ್ಲಿಯವರೆಗೆ ಕಾಂಗ್ರೆಸ್ ಗೆ ಬಹುಮತವಿರಲಿಲ್ಲ. ಆದರೆ ಇದೀಗ ನಾಮ ನಿರ್ದೇಶನ ಸದಸ್ಯರ ನೇಮಕದಿಂದ ಕಾಂಗ್ರೆಸ್ ಬಹುಮತ ಪಡೆಯಲಿದೆ.

ಹೀಗಾಗಿ ತಮ್ಮ ಪಕ್ಷದವರನ್ನೇ ಸಭಾಪತಿ ಮಾಡಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ನಿಂದ ಕೆಸಿ ಕೊಂಡಯ್ಯ, ಎಸ್. ಆರ್ ಪಾಟೀಲ್ ಸಭಾಪತಿ ರೇಸ್ ನಲ್ಲಿದ್ದಾರೆ.

ಜೂನ್ 5ದಿಂದ ಮುಂದುವರಿದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಶಂಕರರ್ಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ಮುಂದಾಗುವ ಸಾಧ್ಯತೆ ಇದೆ.

Congress wants sack Legislative Council Chairman DH Shankaramurthy

ಮೇಲ್ಮನೆ ಬಲಾಬಲ

75 ಸದಸ್ಯ ಬಲದ ಮೇಲ್ಮನೆಯಲ್ಲಿ ಸದ್ಯ ಕಾಂಗ್ರೆಸ್ 30 ಶಾಸಕರನ್ನು ಹೊಂದಿದೆ. ಇನ್ನು ಬಿಜೆಪಿ 22, ಜೆಡಿಎಸ್ 13 ಹಾಗೂ 5 ಪಕ್ಷೇತರರಿದ್ದಾರೆ. ಇನ್ನು ಒಬ್ಬರು ಸಭಾಪತಿ (ಬಿಜೆಪಿ) ಹಾಗೂ 2 ಸ್ಥಾನ ಖಾಲಿ ಇದೆ.

ಇದೀಗ ಮೇಲ್ಮನೆಗೆ ಇಬ್ಬರು ನಾಮ ನಿರ್ದೇಶನಗೊಂಡಿದ್ದಾರೆ. ಜತೆಗೆ ಸದ್ಯದಲ್ಲೇ ಒಬ್ಬರು ನಾಮ ನಿರ್ದೇಶನಗೊಳ್ಳಲಿರುವುದರಿಂದ ಕಾಂಗ್ರೆಸ್ ಬಲ 33 ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಜತೆಗೆ ಪಕ್ಷೇತರ ಶಾಸಕರೂ ಕಾಂಗ್ರೆಸ್ ಬೆಂಬಲಿಸಿದರೆ ಕಾಂಗ್ರೆಸ ಬಲ 38ಕ್ಕೆ ಏರಿಕೆಯಾಗಲಿದೆ. ಇದರಿಂದ ಸ್ಪಷ್ಟ ಬಹುಮತ ಪಡೆಯಬಹುದು.

ಇಲ್ಲಿಯವರೆಗೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದ ಶಂಕರಮೂರ್ತಿ ಸಭಾಪತಿಯಾಗಿದ್ದರು. ಇದೀಗ ಬಿಜೆಪಿ ಸದಸ್ಯೆ ವಿಮಲಾ ಗೌಡ ಮರಣದಿಂದ ಬಿಜೆಪಿ ಒಂದು ಸ್ಥಾನವನ್ನೂ ಕಳೆದುಕೊಂಡಿದೆ. ಹೀಗಾಗಿ ಸದ್ಯ ಬಿಜೆಪಿ ಜೆಡಿಎಸ್ ಒಟ್ಟಾದರೂ ಕೇವಲ 35 ಸ್ಥಾನಗಳಷ್ಟೇ ಆಗುತ್ತವೆ. ಇನ್ನು ಸಂಖ್ಯಾಬಲದಲ್ಲಿ ಆಡಳಿತರೂಢ ಕಾಂಗ್ರೆಸ್ ವಿಮಲಾ ಗೌಡರ ಸ್ಥಾನವನ್ನೂ ಗೆದ್ದುಕೊಳ್ಳಲಿದೆ.

ವಿಮಲಾ ಗೌಡರ ಸ್ಥಾನ ಭರ್ತಿಯಾಗುವುದು ತಡವಾದರೂ ಸದ್ಯದ ಮಟ್ಟಿಗೆ ನಿರಾಯಾಸವಾಗಿ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಗಿಟ್ಟಿಸಬಹುದಾಗಿದೆ. ಹೀಗಾಗಿ ಬಜೆಟ್ ಅಧಿವೇಶನದಲ್ಲಿ ಶಂಕರಮೂರ್ತಿ ಸಭಾಪತಿ ಸ್ಥಾನದಿಂದ ಕೆಳಗಿಳಿಯಬೇಕಾಗಿ ಬರಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+