ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕಾಂಗ ಸಭೆಗೆ ಗೈರಾಗಬೇಡಿ : ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

|
Google Oneindia Kannada News

ಬೆಂಗಳೂರು, ಜನವರಿ 17 : ಆಪರೇಷನ್ ಕಮಲದ ಸುದ್ದಿಗಳ ನಡುವೆಯೇ ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಗೆ ಶಾಸಕರು ಗೈರು ಹಾಜರಾಗಬಾರದು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334ರಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಭೆ ಕುತೂಹಲಕ್ಕೆ ಕಾರಣವಾಗಿದೆ.

ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬುಧವಾರವೇ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಆಪರೇಷನ್ ಕಮಲ : ತಿಳಿಯಬೇಕಾದ 7 ಪ್ರಮುಖ ಸಂಗತಿಗಳುಆಪರೇಷನ್ ಕಮಲ : ತಿಳಿಯಬೇಕಾದ 7 ಪ್ರಮುಖ ಸಂಗತಿಗಳು

ಜನವರಿ 18ರಂದು ನಡೆಯಲಿರುವ ವಿಶೇಷ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸಿದ್ದರಾಮಯ್ಯ ತಮ್ಮ ಆಹ್ವಾನದಲ್ಲಿ ಶಾಸಕರಿಗೆ ಸೂಚನೆ ಕೊಟ್ಟಿದ್ದಾರೆ.

ಆಪರೇಷನ್ ಠುಸ್... 3 ನೇ ಬಾರಿಗೂ ಯಡಿಯೂರಪ್ಪ ಫೇಲ್?ಆಪರೇಷನ್ ಠುಸ್... 3 ನೇ ಬಾರಿಗೂ ಯಡಿಯೂರಪ್ಪ ಫೇಲ್?

ಯಾರ ನೇತೃತ್ವದಲ್ಲಿ ಸಭೆ?

ಯಾರ ನೇತೃತ್ವದಲ್ಲಿ ಸಭೆ?

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಕ್ರಮ ಕೈಗೊಳ್ಳುವ ಎಚ್ಚರಿಕೆ

ಕ್ರಮ ಕೈಗೊಳ್ಳುವ ಎಚ್ಚರಿಕೆ

ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗದಿದ್ದಲ್ಲಿ ಅನುಪಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯತ್ವವನ್ನು ಸ್ವ ಇಚ್ಚೆಯಿಂದ ಬಿಟ್ಟು ಬಿಡಲು ಇಚ್ಛಿಸಿರುವಿರಿ ಎಂದು ಪರಿಗಣಿಸಿ, ಭಾರತೀಯ ಸಂವಿಧಾನದ ಅನುಚ್ಛೇದ -10ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

ಯಾವ-ಯಾವ ಚರ್ಚೆ?

ಯಾವ-ಯಾವ ಚರ್ಚೆ?

ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನಗೊಂಡಿರುವ ಶಾಸಕರ ಅಹವಾಲುಗಳನ್ನು ಸಿದ್ದರಾಮಯ್ಯ ಆಲಿಸಲಿದ್ದಾರೆ. ಸಚಿವ ಸ್ಥಾನ ವಂಚಿತರು, ನಿಗಮ-ಮಂಡಳಿ ಸ್ಥಾನ ಸಿಗದ ಶಾಸಕರು ತಮ್ಮ ಅಹವಾಲುಗಳನ್ನು ಪಕ್ಷದ ನಾಯಕರಿಗೆ ತಿಳಿಸಲಿದ್ದಾರೆ. ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸಚಿವರ ರಾಜೀನಾಮೆ ವಿಚಾರ

ಸಚಿವರ ರಾಜೀನಾಮೆ ವಿಚಾರ

ಅತೃಪ್ತ ಶಾಸಕರ ಮನವೊಲಿಸಿ ಸರ್ಕಾರವನ್ನು ಉಳಿಸಿಕೊಳ್ಳಲು ನಾಲ್ವರು ಸಚಿವರ ರಾಜೀನಾಮೆ ಪಡೆಯಲು ಕಾಂಗ್ರೆಸ್ ಬಯಸಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಯಾವ ಸಚಿವರು ರಾಜೀನಾಮೆ ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಸದಾನಂದ ಗೌಡರ ಟ್ವೀಟ್

ಶಾಸಕರಿಗೆ ಸಿದ್ದರಾಮಯ್ಯ ನೀಡಿದ ಎಚ್ಚರಿಕೆಯನ್ನು ಬಿಜೆಪಿ ವ್ಯಂಗ್ಯವಾಡಿದೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.

English summary
Congress legislative party leader Siddaramaiah strict warning to party leaders ahead of the Congress Legislature Party (CLP) meet on Friday, January 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X