ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ; ಬಿಎಸ್ವೈ

|
Google Oneindia Kannada News

ಶಿವಮೊಗ್ಗ, ನವೆಂಬರ್ 25 : ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 140ಕ್ಕಿಂತ ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಏರಲಿದೆ. ಕಾಂಗ್ರೆಸ್ ಪಕ್ಷವು ಧೂಳೀಪಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು, 140 ಕ್ಕಿಂತ ಹೆಚ್ಚು ಸೀಟು ಗೆಲ್ಲಲು ಪರಿಶ್ರಮ, ಸಂಘಟನೆ ಬಲಪಡಿಸುವುದು ಅಗತ್ಯ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಸಬಲೀಕರಣ, ಮಹಿಳಾ ಸಬಲೀಕರಣ, ಯುವ ಸಬಲೀಕರಣಕ್ಕೆ ಗಮನ ಕೊಟ್ಟರೆ ನಾವು ನಮ್ಮ ಗುರಿ ತಲುಪಬಹುದು ಎಂದು ಕಿವಿಮಾತು ಹೇಳಿದರು.

ಇನ್ನೂ ಚುನಾವಣೆ ಮತ್ತು ಸಂಘಟನೆ ದೃಷ್ಟಿಯಿಂದ ತಯಾರಿ, ವಾಸ್ತವಿಕ ನಮ್ಮ ಸ್ಥಿತಿ ಏನಿದೆ?, ಬೇರೆ ಪಕ್ಷಗಳ ಸ್ಥಿತಿ ಏನಿದೆ? ಎಂದು ಅರ್ಥ ಮಾಡಿಕೊಂಡು ಮುಂದುವರಿದರೆ ನಮ್ಮ ಗುರಿ ತಲುಪಲು ಸಾಧ್ಯ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರದ ಕಾರ್ಯಕ್ರಮಗಳು, ಸಾಧನೆಯನ್ನು ಜಗತ್ತೇ ಅಚ್ಚರಿಯಿಂದ ನೋಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು, ರಾಷ್ಟ್ರೀಯ ಅಧ್ಯಕ್ಷರು ಹೆಚ್ಚು ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು.

Congress Will Not Come To Power In Next Assembly elections Says BS Yediyurappa

ದಕ್ಷಿಣ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಗೆಲುವು ಸಾಧಿಸಿ ದೇಶಕ್ಕೆ ದೊಡ್ಡ ಸಂದೇಶ ಕೊಡಬೇಕಿದೆ ಎಂದ ಅವರು, ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆದು ಸಂಘಟನೆಯನ್ನು ಗಟ್ಟಿಗೊಳಿಸಬೇಕೆಂದು ತಿಳಿಸಿದರು. ಕೇಂದ್ರ- ರಾಜ್ಯಗಳ ಅನೇಕ ಜನಪರ ಯೋಜನೆಗಳು ನಮಗೆ ಬೆನ್ನೆಲುಬಾಗಿ ನಿಂತಿವೆ ಎಂದು ಹೇಳಿದರು.

Congress Will Not Come To Power In Next Assembly elections Says BS Yediyurappa

ಕೃಷಿ ಯಾಂತ್ರೀಕರಣ ಯೋಜನೆಯಡಿ ಹಲವಾರು ಕೃಷಿ ಯಂತ್ರಗಳನ್ನು ಶೇ 50 ರಿಂದ 90 ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಲಾಗುತ್ತಿದೆ. ರಾಷ್ಟ್ರೀಯ ಮಿಷನ್ ಯೋಜನೆಯಡಿಯಲ್ಲಿ ರೈತರಿಗೆ ನೆರವು ಲಭಿಸುತ್ತಿದೆ. ಕೃಷಿಕರಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತಿದೆ. ಫಸಲ್ ವಿಮಾ ಯೋಜನೆಯಡಿ ಬೆಳೆ ಹಾನಿ ಆದಾಗ ಬೆಳೆ ನಷ್ಟದ ಬಗ್ಗೆ ಶೀಘ್ರವೇ ಮಾಹಿತಿ ಪಡೆಯಲಾಗುತ್ತಿದೆ. ಸಿರಿ ಧಾನ್ಯ ಬೆಳೆಯುವವರ ಸಂಖ್ಯೆ ಹೆಚ್ಚಳಕ್ಕೆ ಪ್ರೋತ್ಸಾಹಧನ ಕೊಡಲಾಗುತ್ತಿದೆ. ಗಂಗಾ ಕಲ್ಯಾಣ ಯೋಜನೆ ಸೇರಿ ವಿವಿಧ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.

English summary
Congress will not come to power in next assembly elections said former chief minister B. S. Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X