'ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಉದ್ದಾರ ಆಗಲ್ಲ'
ಹುಬ್ಬಳ್ಳಿ , ಫೆಬ್ರವರಿ 08: ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ, ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಉದ್ದಾರ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತೆಲಂಗಾಣ ,ಕರ್ನಾಟಕ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ, ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ದೆಹಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಅರವಿಂದ್ ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆಯನ್ನ ಅರವಿಂದ್ ಕ್ರೇಜಿವಾಲ್ ಎರಿದ್ದರು..ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದೆಹಲಿ ಜನ ಬಿಜೆಪಿ ಕೈ ಹಿಡಿದಿದ್ದಾರೆ. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ, ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಡಬಲ್ ಇಂಜಿನ್ ಸರ್ಕಾರ ಎಲ್ಲಿದೆ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ.ದೆಹಲಿ ಜನ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಒಪ್ಪಿದ್ದಾರೆ. ದೆಹಲಿಯನ್ನು ಅಭಿವೃದ್ದಿ ಮಾಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ
ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕ ಬರುತ್ತೇವೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಬಿಜೆಪಿಯಲ್ಲವೂ ಎಲ್ಲವೂ ಸರಿ ಇಲ್ಲ. ಭಿನ್ನಮತಕ್ಕೆ ನಾಯಕರು ಇತಿಶ್ರೀ ಹಾಕ್ತಾರೆ, ಅಧ್ಯಕ್ಷರ ಚುನಾವಣೆ ನಡೆಯುತ್ತದೆ. ಸರ್ವಾನುಮತದಿಂದ ಅಧ್ಯಕ್ಷರ ಆಯ್ಕೆ ಆಗಬೇಕು, ಚುನಾವಣೆ ಅನ್ನೋದು ಒಂದು ಪ್ರಕ್ರಿಯೆ ಎಂದು ಬಿಜೆಪಿಯಲ್ಲಿರು ಅಸಮಾಧಾನವನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒಪ್ಪಿಕೊಂಡಿದ್ದಾರೆ.
ದೆಹಲಿ ಫಲಿತಾಂಶ: ರಾಜ್ಯ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ
ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಬಹುಮತ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಇಂದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರು ಹಾಗೂ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಬೆಂಗಳೂರು ನಗರ ಜಿಲ್ಲಾಧ್ಯಕ್ಷರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅತ್ಯಂತ ಸಂತಸದಿಂದ ಪಾಲ್ಗೊಂಡಿದ್ದರು. ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ನಲಿದಾಡಿ ವಿಜಯೋತ್ಸವವನ್ನು ಆಚರಿಸಲಾಯಿತು.












Click it and Unblock the Notifications