ಕಾಂಗ್ರೆಸ್‌ನವರು ಒಂದೇ ಒಂದು ಸೀಟು ಗೆಲ್ಲಲ್ಲ: ಭವಿಷ್ಯ ನುಡಿದ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ

ಹಾಸನ, ಮಾರ್ಚ್‌ 26: ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನ ನಾವು ಗೆಲ್ಲುತ್ತೇವೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ, ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ ನವರು ಒಂದೇ ಒಂದು ಸೀಟ್‌ ಸಹ ಗೆಲ್ಲುವುದಿಲ್ಲ ಎಂದು ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಹಾಸನದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು ತಿಂಗಳಿನಿಂದ ಪ್ರವಾಸ ನಡೆಸುತ್ತಿದ್ದೇನೆ. ಹಾಸನಕ್ಕೂ ಅದೇ ಉದ್ದೇಶದಿಂದ ವಾಸ್ತವ ಸ್ಥಿತಿ ತಿಳಿಯಲು ಬಂದಿದ್ದೇನೆ, ಎಲ್ಲಾ‌ ಕಡೆ ಮೋದಿಯವರಿಗೆ ಅಭೂತಪೂರ್ವ ಬೆಂಬಲ ದೊರೆಕಿದೆ. ಜನರು ಮೋದಿಜಿಯವರಿಗೆ ಮತ ಹಾಕಲು ಹಾತೊರೆಯುತ್ತಿದ್ದಾರೆ ಎಂದು ಹೇಳಿದರು.

Congress Will Not Win A Single Seat Says Radha Mohan Das Agarwal

ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಅಂತರ ತುಂಬಾ ದೊಡ್ಡಮಟ್ಟದಲ್ಲಿದೆ. ನಮಗೂ ಕಾಂಗ್ರೆಸ್ ದೊಡ್ಡಮಟ್ಟದಲ್ಲಿ ಅಂತರವಿರುತ್ತದೆ, ಪ್ರೀತಂಗೌಡ ಹಿಂದೆ ಎಂಎಲ್‌ಎ ಆಗಿದ್ದರು, ಈಗ ರಾಜ್ಯ ಪ್ರಧಾನ ಕಾರ್ಯದರ್ಶಿ ಇದ್ದಾರೆ. ತುಂಬಾ ಪಕ್ಷ ಸಂಘಟನೆಗೆ ಒತ್ತುಕೊಟ್ಟು ಕೆಲಸ ಮಾಡುತ್ತಿದ್ದಾರೆ, ಈ‌ ಭಾರಿ ಶಾಸಕರಾಗಿ ಆಯ್ಕೆಯಾಗದಿದ್ದರು ಅವರ ಶಕ್ತಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿದೆ. ನಮ್ಮ ಕಾರ್ಯಕರ್ತರು ಬಹಳ ತಿಳುವಳಿಕೆ ಉಳ್ಳವರು, ನಮ್ಮ ರಾಷ್ಟ್ರದ ಹಿತಾಸಕ್ತಿಗೆ ಬದ್ದವಾಗಿ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕಾರ್ಯಕರ್ತರ ಜೊತೆ ಸಭೆ ಮಾಡಿದ್ದೇನೆ. ಎಲ್ಲಾ ಕಾರ್ಯಕರ್ತರ ಮನದಲ್ಲಿ ಮೋದಿಜಿ ಅವರ ಬಗ್ಗೆ ಅಗಾಧವಾದ ಅಭಿಮಾನವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಏನು ನಿರ್ಧಾರ ಕೈಗೊಂಡಿದ್ದಾರೆ ಕರ್ನಾಟಕ ಭವಿಷ್ಯಕ್ಕೆ ಎಂದು ಕಾರ್ಯಕರ್ತರು ತಿಳಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ, ಹಿಂದೂಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಹಿಂದೆ ಔರಂಗಜೇಬ್ ಮಾಡುತ್ತಿದ್ದ ಈಗ ಕಾಂಗ್ರೆಸ್ ಮಾಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಿಂದೂಗಳ‌ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ರಾಜ್ಯಸಭೆ ಅವರ ಅಭ್ಯರ್ಥಿ ಆಯ್ಕೆಯಾದರೆ ವಿಧಾನಸೌಧದಲ್ಲಿ ಪಾಕಿಸ್ತಾನದ‌ ಪರ ಘೋಷಣೆ ಕೂಗ್ತಾರೆ. ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ಆಗುತ್ತೆ, ಹನುಮಾನ್ ಚಾಲಿಸ್ ಹಾಕಿದರೆ ಗೂಂಡಾಗಳು ಬಂದು ಹೊಡೆಯುತ್ತಾರೆ. ಇಂತಹ ಸರ್ಕಾರದ ಬಗ್ಗೆ ಜನರಿಗೆ ಅರಿವಿದೆ, ಇಂತಹ ಸರ್ಕಾರ ಆಯ್ಕೆ ಮಾಡಿದ್ದಕ್ಕೆ ಜನಗಳಿಗೆ ಅವರ ತಪ್ಪಿನ ಅರಿವಾಗಿದೆ ಎಂದು ಹೇಳಿದರು.

2023 ರ ಚುನಾವಣೆಯಲ್ಲಿ ಜನರಿಂದ ತಪ್ಪಾಗಿದೆ. ಆ ತಪ್ಪನ್ನು ಈಗ ಸರಿ ಮಾಡುತ್ತಾರೆ, ಜನರ ದೃಷ್ಟಿಯಲ್ಲಿ ಲೋಕಸಭಾ ಚುನಾವಣೆ ನಂತರ ಈ ಸರ್ಕಾರ ಬಿದ್ದು ಹೋಗುತ್ತೆ ಎಂದು ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾ ಮೋಹನ್‌ದಾಸ್ ಅರ್ಗವಾಲ್ ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+