ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಫೆ.27ರಿಂದ ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆ ಪುನಾರಂಭ

|
Google Oneindia Kannada News

ಬೆಂಗಳೂರು, ಫೆಬ್ರವರಿ 19: ಕರ್ನಾಟಕದಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಪಾದಯಾತ್ರೆಯನ್ನು ಮುಂದುವರಿಸುವುದಕ್ಕೆ ನಿರ್ಧರಿಸಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಶನಿವಾರ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ "ಫೆ.27ರಿಂದ ಮೇಕೆದಾಟು ಪಾದಯಾತ್ರೆ ಪುನರಾರಂಭವಾಗಲಿದೆ. ಕರ್ನಾಟಕದ ಒಳಿತಿಗಾಗಿ ಹಾಗೂ ಕುಡಿಯುವ ನೀರಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ನಮ್ಮ ನೀರಿನ ಹಕ್ಕಿಗಾಗಿ ಎಲ್ಲರೂ ಸೇರಿ ಜೊತೆಯಾಗಿ‌ ನಡೆಯೋಣ. ಮೇಕೆದಾಟು ಪಾದಯಾತ್ರೆಯು ಯಶಸ್ವಿಯಾಗಲು ಪಣತೊಡೋಣ," ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಬಿರಿಯಾನಿ, ಬಾಳೇಕಾಯಿ ಬಜ್ಜಿ..ಇದೇ ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ ವ್ಯಂಗ್ಯಬಿರಿಯಾನಿ, ಬಾಳೇಕಾಯಿ ಬಜ್ಜಿ..ಇದೇ ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ ವ್ಯಂಗ್ಯ

Recommended Video

Uttar Pradeshದಲ್ಲಿ ಶೀಘ್ರದಲ್ಲೇ ಹೊಸ ಸರ್ಕಾರ ರಚನೆ ಎಮನದ Rahul Gandhi | Oneindia Kannada

ಕಳೆದ ಜನವರಿ 9ರಂದು ರಾಜ್ಯದಲ್ಲಿ ಕಾಂಗ್ರೆಸ್ ಆರಂಭಿಸಿದ ಮೇಕೆದಾಟು ಪಾದಯಾತ್ರೆಯನ್ನು ಜನವರಿ 13ರಂದು ರಾಮನಗರದಲ್ಲಿ ಮೊಟಕುಗೊಳಿಸಲಾಗಿತ್ತು. ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆ ಮಾರ್ಗಸೂಚಿ ಪಾಲನೆ ಉದ್ದೇಶದಿಂದ ಕಾಂಗ್ರೆಸ್ ತನ್ನ ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿತ್ತು. ಶನಿವಾರ ಮೇಕೆದಾಟು ಪಾದಯಾತ್ರೆ ಬಗ್ಗೆ ಮತ್ತೆ ಸರಣಿ ಟ್ವೀಟ್ ಮಾಡಿರುವ ಡಿ ಕೆ ಶಿವಕುಮಾರ್, ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

Congress Will Restarts it Mekedatu Protest in Karnataka from Feb 27: KPCC President DK Shivakumar

ರಾಜ್ಯದ ಒಳಿತಿಗಾಗಿ ಮೇಕೆದಾಟು ಪಾದಯಾತ್ರೆ:
"ನಾಡಿನ ಒಳಿತಿಗಾಗಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದ ವೇಳೆ ನಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ ಬಿಜೆಪಿ ನಾಯಕರು ನಡೆಸಿದ ಕಾರ್ಯಕ್ರಮಗಳ ಕುರಿತು ಸರ್ಕಾರ ಜಾಣಕುರುಡು ಪ್ರದರ್ಶಿಸಿತು. ಮಾನ್ಯ ಮುಖ್ಯಮಂತ್ರಿಗಳು ದ್ವಂದ್ವ ನಿಲುವು ಅನಿಸರಿಸುತ್ತಿರುವುದು ಖಂಡನಾರ್ಹ," ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯದ್ದು ಒಡೆದು ಆಳುವ ನೀತಿ:
"ಬಿಜೆಪಿಯು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ. ಉಡುಪಿಯಲ್ಲಿ ನಡೆದ ಘಟನೆ ಇದನ್ನು ಪುಷ್ಟೀಕರಿಸುತ್ತದೆ. ನಾಡಿನ ಹಿತಕ್ಕಾಗಿ ನಾವು ಕಟಿಬದ್ಧರಾಗಿದ್ದೇವೆ. ರಾಷ್ಟ್ರಧ್ವಜದ ಗೌರವವನ್ನು ಕಾಪಾಡಲು ಹಾಗೂ ಸಂವಿಧಾನದ ಆಶಯಗಳಿಗೆ ಧಕ್ಕೆ ಬರದಂತೆ ನೋಡಿಕೊಳ್ಳಲು ನಾವು ಹೋರಾಡುತ್ತಿದ್ದೇವೆ," ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಈಶ್ವರಪ್ಪರನ್ನು ಕೈಬಿಡುವಂತೆ ಒತ್ತಾಯ:
"ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವಂತಹ ಮಾತನಾಡಿದ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ದೇಶದ್ರೋಹದ ನಡವಳಿಕೆ ತೋರಿದ ಅವರನ್ನು ಸ್ವಾಗತಿಸುವ ಬಿಜೆಪಿ ಕಾರ್ಯಕರ್ತರು ತಮ್ಮ ನಿಜಬಣ್ಣ ತೋರಿದ್ದಾರೆ. ಸ್ವಾತಂತ್ರ್ಯ ಕಾಲದಿಂದಲೂ ಕಾಂಗ್ರೆಸ್ ಪಕ್ಷ ದೇಶಕ್ಕಾಗಿ‌ ದುಡಿಯುತ್ತಿದೆ. ಬಿಜೆಪಿ ಈ‌ ನಾಡಿಗಾಗಿ ಏನು ಮಾಡಿದೆ?," ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

English summary
Congress Will Restarts it Mekedatu Protest in Karnataka from Feb 27: KPCC President DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X