Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದು ವಾರದಲ್ಲೇ ಮತಾಂತರ ಕಾಯ್ದೆ ರದ್ದು

ಬೆಂಗಳೂರು, ಡಿಸೆಂಬರ್ 27; "ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ" ಎಂದು ಸಿದ್ದರಾಮಯ್ಯ ಹೇಳಿದರು.

ಸೋಮವಾರ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 'ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021' ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿ ವಿಧಾನಸಭೆಯಲ್ಲಿ ಒಪ್ಪಿಗೆ ಪಡೆದಿದೆ.

"ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

Congress Will Scrap Right To Freedom Of Religion Bill 2021 Says Siddaramaiah

"ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? 2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್. ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು. ನಮಗೆ ಇಂತಹ ಮನುಷ್ಯ ವಿರೋಧಿ ಕಾನೂನಿನಲ್ಲಿ ಹಿಂದೆಯೂ ಆಸಕ್ತಿ ಇರಲಿಲ್ಲ, ಈಗಲೂ ಇಲ್ಲ" ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು; ಡಿಸೆಂಬರ್ 23ರಂದು ಮಾತನಾಡಿದ್ದ ಸಿದ್ದರಾಮಯ್ಯ, "ಮತಾಂತರ ನಿಷೇಧ ಕಾಯ್ದೆ ಆರ್. ಎಸ್. ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು. ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್. ಎಸ್. ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡುಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು. ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ" ಎಂದು ಆರೋಪಿಸಿದ್ದರು.

"ಕಾನೂನು ಆಯೋಗಕ್ಕೆ ಮನವಿ ನೀಡಿದ್ದ ಆರ್‌. ಎಸ್. ಎಸ್. ಬೆಂಬಲಿಗರ ತಂಡದಲ್ಲಿ ಚಿದಾನಂದ ಮೂರ್ತಿ, ನರಹರಿ, ಬಿ. ಎನ್. ಮೂರ್ತಿ, ಜೈದೇವ್, ಆರ್. ಲೀಲಾ, ಮತ್ತೂರ್ ಕೃಷ್ಣಮೂರ್ತಿ ಇದ್ದರು. ನಮ್ಮ ಸರ್ಕಾರದ ಕಾಲದಲ್ಲಿ ಕಾನೂನು ಇಲಾಖೆಯ ಕೈ ಸೇರಿದ್ದ ಕರಡು ಕಾನೂನನ್ನು 2015ರಲ್ಲಿಯೇ ತಿರಸ್ಕರಿಸಿದ್ದೆವು. ಕರಡನ್ನು ನಾವು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ಮಾಡಿಲ್ಲ, ಅನುಮೋದನೆಯನ್ನೂ ನೀಡಿಲ್ಲ" ಎಂದು ಸ್ಪಷ್ಟಪಡಿಸಿದ್ದರು.

"ಮುಖ್ಯಮಂತ್ರಿ ಈ ರೀತಿ ಸಂಪುಟ ಚರ್ಚೆಗೆ ತನ್ನಿ ಎಂದ ಅನೇಕ ವಿಷಯಗಳು, ಕಡತಗಳು ತಿರಸ್ಕರಿಸಲ್ಪಟ್ಟಿವೆ, ಕೆಲವು ಮುಂದೂಡಲ್ಪಟ್ಟಿವೆ, ಇನ್ನು ಕೆಲವು ಸಂಪುಟ ಉಪ ಸಮಿತಿಗೆ ಹೋಗಿವೆ. ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮ ರೂಪಿಸಲಾಗಿದೆ" ಎಂದು ಹೇಳಿದ್ದರು.

"ಸಾಮಾನ್ಯರು ಮತಾಂತರವಾದಾಗ ಒಂದು ಶಿಕ್ಷೆ, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಅಪ್ರಾಪ್ತರು, ಬುದ್ದಿಭ್ರಮಣೆಯಾದವರನ್ನು ಮತಾಂತರ ಮಾಡಿದಾಗ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಆದರೆ ಇಂತಹುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿನ ಎದುರು ಸರ್ವರೂ ಸಮಾನರು. ಕಾನೂನು ಇಲಾಖೆ ಮೂಲಕ ಬಂದಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ನಮ್ಮ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಹೆಚ್. ಆಂಜನೇಯ ಅವರು ಸಂಪುಟದ ಮುಂದೆ ತರುವ ಅಗತ್ಯವಿಲ್ಲ ಎಂದು ಷರಾ ಬರೆದು ತಿರಸ್ಕರಿಸಿದ್ದರು" ಎಂದು ಸಿದ್ದರಾಮಯ್ಯ ತಿಳಿಸಿದ್ದರು.

"ತಿರಸ್ಕೃತಗೊಂಡ ಕರಡು ಕಾಯ್ದೆ ನಮ್ಮ ಸರ್ಕಾರದ ಕಾಲಾವಧಿಯಲ್ಲಿ ಮತ್ತೆಂದೂ ಚರ್ಚೆಗೆ ಬರಲಿಲ್ಲ. ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015 ರ ನವೆಂಬರ್ ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದರ ಕಡೆ ಗಮನ ನೀಡದೆ ಇರುತ್ತಿದ್ದೆವಾ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು.

"ಮತಾಂತರ ನಿಷೇಧ ಕಾಯ್ದೆ ಆರ್. ಎಸ್. ಎಸ್ ಕೈವಾಡದಿಂದ ರೂಪುಗೊಂಡಿದ್ದರಲ್ಲಿ ಅನುಮಾನವೇ ಇಲ್ಲ. ಗುಜರಾತ್, ಉತ್ತರ ಪ್ರದೇಶ ಮತ್ತು ಕರ್ನಾಟಕ ಎಲ್ಲಾ ರಾಜ್ಯಗಳ ಕಾನೂನು ಒಂದೇ ರೀತಿಯ ಪದಬಳಕೆಯಿಂದ ಕೂಡಿದೆ. ಒಬ್ಬರೇ ಮೂರೂ ಕರಡು ಕಾಯ್ದೆಗಳನ್ನು ತಯಾರು ಮಾಡಿದಂತಿದೆ" ಎಂದು ಸಿದ್ದರಾಮಯ್ಯ ದೂರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+