ಪುಟ್ಟಣ್ಣಯ್ಯ ಕುಟುಂಬದವರು ಚುನಾವಣೆ ಸ್ಪರ್ಧಿಸಿದರೆ ಕಾಂಗ್ರೆಸ್ ಬೆಂಬಲ
ಮಂಡ್ಯ, ಮಾರ್ಚ್ 09 : 'ಕೆ.ಎಸ್.ಪುಟ್ಟಣ್ಣಯ್ಯ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಿದರೆ ಕಾಂಗ್ರೆಸ್ ಬೆಂಬಲ ನೀಡಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಾಂಡವಪುರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಮೇಲುಕೋಟೆ ಕ್ಷೇತ್ರದಲ್ಲಿ ಪುಟ್ಟಣ್ಣಯ್ಯ ಅವರ ಕುಟುಂಬದವರು ಚುನಾವಣೆ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆ' ಎಂದರು.
'ಪುಟ್ಟಣ್ಣಯ್ಯ ಅವರು ಬದುಕಿದ್ದಾಗ ಕಾಂಗ್ರೆಸ್ ಬೆಂಬಲಿಸಿದ್ದರು. ಜ್ಯಾತ್ಯಾತೀತ ನಿಲುವು ಹೊಂದಿದ್ದು, ಕೋಮುವಾದಿಗಳ ವಿರುದ್ಧ ಹೋರಾಡುತ್ತಿದ್ದರು. ಆದ್ದರಿಂದ, ಅವರ ಉತ್ತರಾಧಿಕಾರಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ' ಎಂದು ತಿಳಿಸಿದರು.

ಪ್ರಕರಣ ವಾಪಸ್ : 'ರೈತ ಹೋರಾಟಗಾರರ ಮೇಲೆ ದಾಖಲು ಮಾಡಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಪುಟ್ಟಣ್ಣಯ್ಯ ಅವರು ಬಯಸಿದ್ದರು. ಈ ಕುರಿತು ಸಂಪುಟ ಉಪ ಸಮಿತಿಗೆ ಸೂಚನೆ ನೀಡಿದ್ದೇನೆ' ಎಂದು ಸಿದ್ದರಾಮಯ್ಯ ಹೇಳಿದರು.
ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಚುನಾವಣಗೆ ಸ್ಪರ್ಧಿಸಿದರೆ ಸ್ವರಾಜ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸುವೆ ಎಂದು ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.











Click it and Unblock the Notifications