ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು ಗೊತ್ತಾ? ಜಗದೀಶ್‌ ಶೆಟ್ಟರ್‌ ಲೆಕ್ಕಾಚಾರ!

ಹುಬ್ಬಳ್ಳಿ, ಆಗಸ್ಟ್‌ 02: 2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸಿದ್ದತೆಯನ್ನ ನಡೆಸುತ್ತಿದ್ದು, ಕರ್ನಾಟಕದಲ್ಲಿ 15 ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಯ ವೇಳೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕಕ್ಕೆ ಬಂದು ನೂರಾರು ಕಡೆ ಪ್ರಚಾರ ಹಾಗೂ ರ್ಯಾಲಿಯನ್ನ ನಡೆಸಿದರು. ಆದರೆ, ಫಲಿತಾಂಶ ಏನಾಯ್ತು ಎಂದು ಪ್ರಶ್ನಿಸಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 20 ಸ್ಥಾನಗಳನ್ನ ಗೆಲ್ಲಲಿದೆ ಎಂದು ತಿಳಿಸಿದರು.

lok-sabha-elections

ಇನ್ನೂ ವಿರೋಧ ಪಕ್ಷದ ನಾಯಕ ಆಯ್ಕೆ ವಿಳಂಬದ ಕುರಿತು ಮಾತನಾಡಿ, ಬಿಜೆಪಿ ಲೀಡರ್‌ ಲೆಸ್‌ ಪಾರ್ಟಿಯಾಗಿದ್ದು, ದಿನೇ ದಿನೇ ದಯನೀಯ ಸ್ಥಿತಿಗೆ ಹೋಗುತ್ತಿದೆ. ಬಿಜೆಪಿಗರಿಗೆ ಈ ವರೆಗೂ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾಗುತ್ತಿಲ್ಲ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ನಲ್ಲಿ ಎರಡೂ ಕಡೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಇಂದಿಗೂ ಸಾಧ್ಯವಾಗದಿರುವುದು ಹಾಸ್ಯಾಸ್ಪದ ಎಂದು ರಾಜ್ಯ ಬಿಜೆಪಿಯ ವಿರುದ್ದ ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಮುಂದಿನ ಚುನಾವಣೆ ಸಿದ್ದತೆ ಕುರಿತು ದೆಹಲಿಯಲ್ಲಿ ವರಿಷ್ಠರೊಂದಿಗೆ ರಾಜ್ಯದ ಪರಿಸ್ಥಿತಿ ಕುರಿತಂತೆ ಚರ್ಚೆಯಾಗಲಿದೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚೆಯಾಗಲಿದೆ. ಕೇವಲ ಒಂದು ಕ್ಷೇತ್ರದ ಬಗ್ಗೆ ಅಲ್ಲ, ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಂಘಟನೆ ಹಾಗೂ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಯಾಗಲಿದೆ.

ಇನ್ನೂ ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳ ಪ್ರಶ್ನೆ ಉತ್ತರಿಸಿದ ಅವರು, ಕಳೆದ ಐದಾರು ವರ್ಷಗಳಿಂದ ಬೆಲೆ ಏರಿಕೆ ಬಗ್ಗೆ ಚಿಂತನೆ ಇತ್ತು. ಇದೀಗ ರೈತರ ಅನುಕೂಲಕ್ಕಾಗಿ ಹಾಗೂ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+