ರಾಜ್ಯದಲ್ಲಿ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು? : ಭವಿಷ್ಯ ನುಡಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್‌ 04: ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್‌ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಇದೀಗ ಮುಂದಿನ ಲೋಕಸಭಾ ಚುಣಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಕೊಟ್ಟ ಗುರಿಯನ್ನ ಮುಟ್ಟುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ತಯಾರಿ ನಡೆಸಿದ್ದು, ಇದೀಗ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಸಿಎಂ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷವು ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ನಿರತವಾಗಿದ್ದು, ಚುನಾವಣೆಯಲ್ಲಿ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

Congress will Win 20 ls Seats In State Says CM Siddaramaiah

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಜಿಲ್ಲೆಯ ಜನತೆಯ ಸಮಯಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ ಎಂದು ಪ್ರಶ್ನಿಸಿದರು. ಇನ್ನೂ ಅಭಿವೃದ್ಧಿ ಶೂನ್ಯ ಬಿಜೆಪಿ, ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013 , 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.

Congress will Win 20 ls Seats In State Says CM Siddaramaiah

4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮಲೆನಾಡ ಭಾಗದಲ್ಲಿ ಕಾಫಿ ಪ್ಲಾಂಟರ್ಸ್ ಗಳ ಬಹುದಿನಗಳ ಬೇಡಿಕೆಯಾಗಿದ್ದ ಕಾಫಿ ಪ್ಲಾಂಟೇಷನ್ ಲೀಸ್ ಮೇಲೆ ನೀಡುವ ಕುರಿತು ನಮ್ಮ ಸರ್ಕಾರ ತೀರ್ಮಾನ ಕೈಗೊಂಡಿದೆ. ಶೀರ್ಘದಲ್ಲಿ ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲು ಕ್ರಮ ಕೈಗೊಳ್ಳಲಿದೆ. ಇದರಿಂದ ಕಾಫಿ ಬೆಳೆಗಾರ ಸಮುದಾಯಕ್ಕೆ ಮತ್ತು ಬಹಳಷ್ಟು ಜನರಿಗೆ ಅನುಕೂಲ‌ ಆಗಲಿದೆ ಎಂದು, ತಜ್ಷಣ ನಿಯಮಗಳನ್ನು ರೂಪಿಸುವಂತೆ DC, CEO ಗಳಿಗೆ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+