ಕರ್ನಾಟಕದ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು; ಸುರ್ಜೇವಾಲಾ ಹೇಳಿದ್ದೇನು?
ಬೆಂಗಳೂರು, ಜೂನ್ 05: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವ ನಿಟ್ಟಿನಲ್ಲಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ತಂತ್ರಗಾರಿಕೆಯನ್ನ ನಡೆಸಿತ್ತು. ಇದೀಗ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಈ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮೂಲಕ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಶುಭಕೋರಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಗೆಲುವು ಸಾಧಿಸಿದ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಹಾಸನ ಲೋಕಸಭಾ ಕ್ಷೇತ್ರದ ಶ್ರೇಯಸ್ ಪಟೇಲ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್,ದಾವಣಗೆರೆ ಲೋಕಸಭಾ ಕ್ಷೇತ್ರದ ಡಾ.ಪ್ರಭಾ ಮಲ್ಲಿಕಾರ್ಜುನ್,ಕೊಪ್ಪಳ ಲೋಕಸಭಾ ಕ್ಷೇತ್ರದ ರಾಘವೇಂದ್ರ ಹಿಟ್ನಾಳ್,ಬಳ್ಳಾರಿ ಲೋಕಸಭಾ ಕ್ಷೇತ್ರದ ಈ ತುಕಾರಾಮ್, ರಾಯಚೂರು ಲೋಕಸಭಾ ಕ್ಷೇತ್ರದ ಕುಮಾರ್ ನಾಯ್ಕ್, ಬೀದರ್ ಲೋಕಸಭಾ ಕ್ಷೇತ್ರದ ಸಾಗರ್ ಖಂಡ್ರೆ, ಕಲಬುರ್ಗಿ ಲೋಕಸಭಾ ಕ್ಷೇತ್ರದ ರಾಧಾಕೃಷ್ಣ ದೊಡ್ಡಮನಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಿಯಾಂಕಾ ಜಾರಕಿಹೊಳಿ ರವರುಗಳಿಗೆ ಅಭಿನಂದನೆಗಳು.

ಈ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ನಮ್ಮೆಲ್ಲಾ ಪ್ರೀತಿಯ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು, ಪಕ್ಷದ ಪದಾಧಿಕಾರಿಗಳು ಮತ್ತು ಎಲ್ಲಾ ಹಿರಿಯ ಕಿರಿಯ ಮತ್ತು ಹಿರಿಯ ನಾಯಕರುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
ಕರ್ನಾಟಕ ರಾಜ್ಯದಲ್ಲಿ ಗೆಲುವು ಸಾಧಿಸಿದ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಹಾಸನ ಲೋಕಸಭಾ ಕ್ಷೇತ್ರದ ಶ್ರೇಯಸ್ ಪಟೇಲ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್,ದಾವಣಗೆರೆ ಲೋಕಸಭಾ ಕ್ಷೇತ್ರದ ಡಾ.ಪ್ರಭಾ ಮಲ್ಲಿಕಾರ್ಜುನ್,
— Randeep Singh Surjewala (@rssurjewala) June 4, 2024
ಕೊಪ್ಪಳ ಲೋಕಸಭಾ ಕ್ಷೇತ್ರದ ರಾಘವೇಂದ್ರ ಹಿಟ್ನಾಳ್,
ಬಳ್ಳಾರಿ ಲೋಕಸಭಾ ಕ್ಷೇತ್ರದ ಈ ತುಕಾರಾಮ್,
ರಾಯಚೂರು…
ನಮ್ಮ ಪಕ್ಷದ ಪರಾಜಿತ ಅಭ್ಯರ್ಥಿಗಳು ಧೃತಿಗೆಡಬೇಡಿ ಏಕೆಂದರೆ ಕಾಂಗ್ರೆಸ್ ಪಕ್ಷವನ್ನು ನಂಬಿ ನಮಗೆ ಮತ ನೀಡಿ ಆಶೀರ್ವಾದಿಸಿದ ಕೋಟ್ಯಾಂತರ ಕನ್ನಡಿಗರ ನಂಬಿಕೆ ಉಳಿಸಿಕೊಳ್ಳುವ ಜವಾಬ್ದಾರಿ ನಿಮ್ಮ ಹಾಗೂ ಪಕ್ಷದ ಮೇಲಿದ್ದು ಹಾಗಾಗಿ ಕನ್ನಡಿಗರ ಧ್ವನಿಯಾಗಿ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸವನ್ನು ಮುಂದುವರಿಸೋಣ ಎಂದು ತಿಳಿಸಿದ್ದಾರೆ.












Click it and Unblock the Notifications