ಬಿಜೆಪಿ-ಜೆಡಿಎಸ್‌ ಮೈತ್ರಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್‌ ಖುಷಿ ವ್ಯಕ್ತಪಡಿಸಿದ್ದು ಹೀಗೆ

ಬೆಂಗಳೂರು, ಫೆಬ್ರವರಿ 21:ಲೋಕಸಭಾ ಚುಣಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯಗಳಿಸಿದ್ದಾರೆ. ಈ ಗೆಲುವು ಕೇವಲ ಆರಂಭವಷ್ಟೇ. ಲೋಕಸಭೆ ಚುನಾವಣೆಯಲ್ಲಿ ಜನರ ಮನಸ್ಥಿತಿ ಏನು ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖುಷಿ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಚುನಾವಣೆಯನ್ನು ರಾಜ್ಯ ರಾಜಕೀಯದ, ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಬಣ್ಣಿಸುತ್ತಿದ್ದರು. ಇಂದು ಪ್ರಜ್ಞಾವಂತ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪುಟ್ಟಣ್ಣ ಅವರಿಗೆ ಅಭಿನಂದನೆ ಹಾಗೂ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ.

Congress wins in Legislative Council elections: Know What DK Shivakumar Says

ರಾಜ್ಯ ಹಾಗೂ ಸರ್ಕಾರಕ್ಕೆ ಇಂದು ವಿಶೇಷವಾದ ದಿನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದಿದೆ. ಹಿಂದೆ ಪುಟ್ಟಣ್ಣ ಅವರೇ ಬಿಜೆಪಿಯಿಂದ ಗೆದ್ದಿದ್ದರು. ಅದು ಬಿಜೆಪಿಯ ಕ್ಷೇತ್ರವಾಗಿತ್ತು. ಆದರೆ ಅವರು ಈ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟು, ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿದ್ದರು.

ಪುಟ್ಟಣ್ಣ ಅವರು ಸತತವಾಗಿ ಐದನೇ ಬಾರಿಗೆ ಗೆದ್ದಿದ್ದಾರೆ. ಅವರು ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಪ್ರಕಾಶ್ ಹುಕ್ಕೇರಿ, ಮಂಡ್ಯದಲ್ಲಿ ಮಧು ಮಾದೇಗೌಡ ಅವರು ಗೆದ್ದಿದ್ದರು. ಈ ಫಲಿತಾಂಶದ ಮೂಲಕ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಇದು ಹೆಮ್ಮೆ ತಂದಿದ್ದು, ಇವರ ಸೇವೆ ನಾವು ಮಾಡುತ್ತೇವೆ. ಪುಟ್ಟಣ್ಣ ಅವರು ಶಿಕ್ಷಕರ ಪರವಾಗಿ ಎತ್ತುವ ಧ್ವನಿಗೆ ನಾವು ಆದ್ಯತೆ ನೀಡುತ್ತೇವೆ.

Congress wins in Legislative Council elections: Know What DK Shivakumar Says

ನಮ್ಮ ಸರ್ಕಾರ ಈಗಾಗಲೇ ನಿರುದ್ಯೋಗ ಪದವೀಧರರಿಗೆ ಯುವನಿಧಿ ಮೂಲಕ ನಿರುದ್ಯೋಗ ಭತ್ಯೆ ನೀಡುತ್ತಿದೆ. ನಮಗೆ ಬೆಂಬಲವಾಗಿ ನಿಂತ ಕಾರ್ಯಕರ್ತರು, ಶಿಕ್ಷಣ ಆಡಳಿತ ಮಂಡಳಿಗಳು, ಮುಖಂಡರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಧನ್ಯವಾದ ಸಲ್ಲಿಸುತ್ತೇನೆ. ಅಧಿಕಾರಿಗಳ ದುರ್ಬಳಕೆಯಾಗಿದೆ ಎಂಬ ಮೈತ್ರಿ ಅಭ್ಯರ್ಥಿ ಹೇಳಿಕೆ ಬಗ್ಗೆ ಕೇಳಿದಾಗ, "ಸೋತವರು ಏನು ಹೇಳಲು ಸಾಧ್ಯ? ಬಿದ್ದರು ಮೀಸೆ ಮಣ್ಣಾಗಲಿಲ್ಲ" ಎಂಬ ಗಾದೆ ಇದೆ. ಅವರು ಎಲ್ಲಾ ಪ್ರಯತ್ನ ಮಾಡಿದ್ದಾರೆ" ಎಂದು ತಿಳಿಸಿದರು.

ರಾಜ್ಯಸಭೆ ಚುನಾವಣೆಗೆ ಆಮಿಷ ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ಶಾಸಕರು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದ ಅವರು, ನನಗೂ ಈ ವಿಚಾರವಾಗಿ ಮಾಹಿತಿ ಬಂದಿವೆ. ತನಿಖಾ ತಂಡ ಇದರ ತನಿಖೆ ಮಾಡಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+