ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರು: ದುರ್ದೈವದ ಸಂಗತಿ ಎಂದ ಯಡಿಯೂರಪ್ಪ

ಬೆಂಗಳೂರು, ಜನವರಿ 11: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಈ ಕುರಿತು ಗುರುವಾರ ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು. ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Congress Wont Attend Ram Mandir Inauguration : Know What BY Yediyurappa Says

ಕಾಂಗ್ರೆಸ್ಸಿಗರು ಯಾಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ.

ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+