ನಿಗಮ-ಮಂಡಳಿ ಸ್ಥಾನಕ್ಕೆ ರಾಹುಲ್‌ ಗಾಂಧಿ ಹೆಸರಲ್ಲಿ ನಕಲಿ ಪತ್ರ

Written By: Ramesh
Subscribe to Oneindia Kannada

ಬೆಂಗಳೂರು, ಅಕ್ಟೋಬರ್. 24: ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೆಸರಿನಲ್ಲೇ ನಕಲಿ ಶಿಫಾರಸ್ಸು ಪತ್ರವೊಂದನ್ನು ಸೃಷ್ಟಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿಯ ಸಂತೋಷ ಪಾಟೀಲ ಎನ್ನುವರೆ ನಕಲಿ ಪತ್ರ ಸೃಷ್ಠಿಸಿದ ಭೂಪ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿವಾಸಿಯಾಗಿರುವ ಸಂತೋಷ ಪಾಟೀಲ ಅವರು ಬಹಳ ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಅದ್ದರಿಂದ ಇವರನ್ನು ಎನ್‌ಡಬ್ಲ್ಯುಕೆಆರ್ ಟಿಸಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ ಎಂದು ಪತ್ರದಲ್ಲಿ ಬರೆಯಲಾಗಿದೆ.

Rahul

ಈ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರಿಗೆ ರಾಹುಲ್ ಗಾಂಧಿ ಅವರು ಆದೇಶಿಸಿದಂತೆ ಪತ್ರವನ್ನು ಸೃಷ್ಟಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು ಇಂತಹ ಯಾವುದೇ ಪತ್ರ ರಾಹುಲ್‌ ಗಾಂಧಿ ಅವರಿಂದ ಬಂದಿಲ್ಲ. ರಾಹುಲ್ ಲೆಟರ್‌ ಹೆಡ್‌ನಲ್ಲಿರುವ ಪತ್ರ ನಕಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಿಗಮ ಮಂಡಳಿಯನ್ನು ಭರ್ತಿ ಮಾಡಲು ಹೈಕಮಾಂಡ್ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ, ಪರಮೇಶ್ವರ್ ಅವರು ದೆಹಲಿಗೆ ತೆರಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress worker in Belagavi has landed in trouble after he tried to clinch the post of chairman of North Western Karnataka Road Transport Corporation (NWKRTC) by producing a ‘recommendation letter’ from AICC vice-president Rahul Gandhi
Please Wait while comments are loading...