ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕೆಂದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಬೇಕಿದೆ. ಇಲ್ಲವಾದಲ್ಲಿ ಅಸಮಾನತೆ ಹೋಗಲು ಸಾಧ್ಯವಿಲ್ಲ, ಅಂತೆಯೇ ಅಸಮಾನತೆ ತೊಲಗದೇ, ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವುವೂ ಅಸಾಧ್ಯ ಎಂದು ಹೇಳಿದ್ದನ್ನು ತಿಳಿಸಿದರು.
ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಗ ಮಾತ್ರರೆ ಮಾತ್ರ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದರು. ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೇ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯಾತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಬಡವರ ಒಳಿತಿಗೆ ಕರ್ತವ್ಯ ನಿರ್ವಹಿಸುವಾಗ, ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕಲ್ಲದೇ, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು.ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ಅವರಿಗೆ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ ಮಾಡಬೇಕು. ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು.












Click it and Unblock the Notifications