ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಬಿಜೆಪಿ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ಸಮಯದಲ್ಲೇ, ಕಮಲ ಪಾಳಯದ ಕೈ ಮತ್ತಷ್ಟು ಬಲವಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ಬಳಿಕ ಇದೀಗ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಇದೇ ವೇಳೆ ಜಗದೀಶ್ ಶೆಟ್ಟರ್ ಕೂಡ ಕಾಂಗ್ರೆಸ್‌ಗೆ ಕೈಕೊಟ್ಟು, ಮತ್ತೆ ಬಿಜೆಪಿ ಮನೆ ಸೇರಿದ್ದಾರೆ. ಆದರೆ ಇದರಿಂದ ಆಕ್ರೋಶವೂ ಭುಗಿಲೆದ್ದಿದೆ.

ಹೌದು, 2023ರ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ತಮಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದರು. ಇದೀಗ ಮತ್ತೆ ಬಿಜೆಪಿ ಮನೆಗೆ ಮರಳಿರುವ ಜಗದೀಶ್ ಶೆಟ್ಟರ್, ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸುವ ಸೂಚನೆ ನೀಡಿದ್ದಾರೆ. ಹೀಗಿದ್ದಾಗ ಬಿಜೆಪಿ ನಾಯಕರು ಕೂಡ ಫುಲ್ ಖುಷ್ ಆಗಿದ್ದಾರೆ. ಆದರೆ ಇದೇ ಸಮಯದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಆಕ್ರೋಶ ಕೂಡ ಮೊಳಗಿದೆ. ಯಾಕೆ ಗೊತ್ತಾ? ಆ ಬಗ್ಗೆ ಮಾಹಿತಿಗೆ ಮುಂದೆ ಓದಿ.

Congress Workers Are Angry Against Jagadish Shettar After He Returns To BJP

ಶೆಟ್ಟರ್ ವಿರುದ್ಧ ಕಾಂಗ್ರೆಸ್ ಆಕ್ರೋಶ!

ಅಂದಹಾಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಪಕ್ಷದಿಂದಲೇ ಎಂಎಲ್‌ಸಿ ಆಗಿದ್ದ ಜಗದೀಶ್ ಶೆಟ್ಟರ್ ಈಗ ಪಕ್ಷ ಬಿಟ್ಟಿದ್ದಾರೆ. ಆದರೆ ಹೀಗೆ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ವಾಪಸ್ ಆಗಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಟ್ಟು ತರಿಸಿದೆ. ಹೀಗಾಗಿ ಇದೀಗ ಭಾರಿ ಪ್ರತಿಭಟನೆ ಹಾಗೂ ಆಕ್ರೋಶ ಭುಗಿಲೆದ್ದಿದೆ. ಇದೇ ರೀತಿ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಬಿಟ್ಟು ಮರಳಿ ಬಿಜೆಪಿ ಸೇರಿದ್ದಕ್ಕೆ ಈಗ ಕಾಂಗ್ರೆಸ್ ಕಾರ್ಯಕರ್ತರು ಶೆಟ್ಟರ್ ಫೋಟೋ ಎದುರು ಪಟಾಕಿ ಸಿಡಿಸಿ & ಸಿಹಿ ತಿನ್ನಿಸುತ್ತ ವಿಜಯೋತ್ಸವ ಆಚರಿಸಿದ್ದಾರೆ.

ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ನಲ್ಲಿ ಜಗದೀಶ್ ಶೆಟ್ಟರ್ ಫೋಟೋ ಎದುರು ಹೀಗೆ ಪಟಾಕಿಯ ಸಿಡಿಸಿ, ಶೆಟ್ಟರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಲು ಶೆಟ್ಟರ್ ಬಂದಿದ್ದರು ಎಂದು ಕಾಂಗ್ರೆಸ್‌ನ ಕಾರ್ಯಕರ್ತರು ಈಗ ಗಂಭೀರ ಆರೋಪ ಮಾಡಿದ್ದಾರೆ.

Congress Workers Are Angry Against Jagadish Shettar After He Returns To BJP

ಬಿಎಸ್‌ವೈ ರಣತಂತ್ರ ವರ್ಕೌಟ್?

ಮಾಜಿ ಸಿಎಂ ಯಡಿಯೂರಪ್ಪ ಈಗಲೂ ಕರ್ನಾಟಕ ರಾಜಕೀಯದಲ್ಲಿ ಅದೆಷ್ಟು ಹಿಡಿತ & ಶಕ್ತಿ ಹೊಂದಿದ್ದಾರೆ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ. ಜಗದೀಶ್ ಶೆಟ್ಟರ್ ಅವರನ್ನು, ಬಿಜೆಪಿಗೆ ವಾಪಸ್ ಕರೆತರುವಲ್ಲಿ ಬಿ.ಎಸ್. ಯಡಿಯೂರಪ್ಪ, ಹಾಗೂ ಅವರ ಪುತ್ರ ವಿಜಯೇಂದ್ರ ಅವರ ಶ್ರಮ ಸಾಕಷ್ಟು ಇದೆ ಎನ್ನಲಾಗಿದೆ. ಅದ್ರಲ್ಲೂ ಕಾಂಗ್ರೆಸ್ ನಾಯಕರು ಲೋಕಸಭೆ ಚುನಾವಣೆಗೆ ತಂತ್ರ ಹೂಡುವಾಗಲೇ ದೊಡ್ಡ ಆಘಾತವನ್ನು ಕೂಡ ಕೊಟ್ಟಿದೆ ಕರ್ನಾಟಕ ಬಿಜೆಪಿ.

ವಿಜಯೇಂದ್ರ ಪವರ್ ತೋರಿಸಿದ್ರಾ?

ಕೆಲ ತಿಂಗಳ ಹಿಂದಷ್ಟೆ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಭರ್ಜರಿ ಸ್ಟ್ರಾಟಜಿ ಪ್ಲೇ ಮಾಡಿ ಗೆದ್ದಿದ್ದು. ಕಾಂಗ್ರೆಸ್ ನಾಯಕರಿಗು ಇದರಿಂದ ಆಘಾತ ನೀಡಿದ್ದಾರೆ. ಈಗಾಗಲೇ, ಲೋಕಸಭೆ ಚುನಾವಣೆ ಅಖಾಡದಲ್ಲಿ ಮುಂದಿರುವ ಬಿಜೆಪಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ. ಹೀಗೆ, ಜಗದೀಶ್ ಶೆಟ್ಟರ್ ಸೇರ್ಪಡೆಯು ಬಿಜೆಪಿಗೆ ಮತ್ತಷ್ಟು ಬಲ ನೀಡಿದಂತಾಗಿದೆ.

ಕಾಂಗ್ರೆಸ್ ನಾಯಕರಿಗೆ ಭಾರಿ ಆಘಾತ

ದಿಢೀರ್ ಹೀಗೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಬಿಟ್ಟು, ಮತ್ತೊಮ್ಮೆ ಬಿಜೆಪಿಯ ಬಾಗಿಲನ್ನು ತಟ್ಟಿರುವುದು ಕಾಂಗ್ರೆಸ್ ನಾಯಕರಿಗೂ ಆಘಾತ ಕೊಟ್ಟಿದೆ. 2023ರ ಕರ್ನಾಟಕ ವಿಧಾನಸಭೆಯ ಚುನಾವಣೆ ವೇಳೆ ಜಗದೀಶ್ ಶೆಟ್ಟರ್ ಅವ್ರನ್ನ ಅದ್ಧೂರಿಯಾಗಿ ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದರು. ಆದರೆ ಕೆಲ ತಿಂಗಳಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿ, ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ದೊಡ್ಡ ಆಘಾತ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+