ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಎಸ್ಎಸ್ಎಲ್‌ಸಿ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ''

|
Google Oneindia Kannada News

ಬೆಂಗಳೂರು, ಜೂನ್ 5: ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ತಿಳಿಸಿದ್ದರು.

ಪೂರ್ವಭಾವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಆಗ ಪಡೆದ ಅಂಕಗಳ ಆಧಾರದ ಮೇಲೆ ಈಗ ಮಾನದಂಡ ನಿಗದಿ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

ಅದೇ ರೀತಿ ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.

Consider SSLC Marks And First PU Exam Marks For 2nd PUC Results: Education Minister S Suresh Kumar

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ನ್ಯಾಯಯುತವಾಗಿರಲು ಈ ನಡೆಯನ್ನು ಅನುಸರಿಸುತ್ತಿದ್ದೇವೆ. ಈ ಕುರಿತು ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದರು.

ಕರ್ನಾಟಕ‌ ಪ್ರೌಢ ಶಿಕ್ಷಣ‌ ಪರೀಕ್ಷಾ ಮಂಡಳಿಯಿಂದ ಅಂಕಿ-ಅಂಶ ಪಡೆಯಬೇಕು ಎಂದು ಸೂಚಿಸಲಾಗಿದ್ದು, ಜೊತೆಗೆ ಪ್ರಥಮ ಪಿಯುಸಿ ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಲೂ ಆದೇಶಿಸಲಾಗಿದೆ. ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶ ಘೋಷಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ವೃತ್ತಿಪರ‌ ಕೋರ್ಸ್‌ಗೆ ಸಿಇಟಿ ಅಂಕ ಮಾತ್ರ ಪರಿಗಣಿಸಿ

ಇನ್ನು ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಹಿನ್ನೆಲೆ ಈ ಮನವಿ ಮಾಡಿಕೊಂಡಿರುವ ಅವರು, ವೃತ್ತಿಪರ‌ ಕೋರ್ಸ್‌ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆ ಬೇಡ ಎಂದಿದ್ದಾರೆ.

Recommended Video

ಮಹಿಳಾ ಅಧಿಕಾರಿಗಳ ಜಗಳ , ನಾಯಕರಿಗೆ ಬೇಸರ ! | Oneindia Kannada

ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಶ್ರೇಣಿಗೆ ಪರಿಗಣಿಸುವ ತೀರ್ಮಾನ ತೆಗೆದುಕೊಳ್ಳಿ ಎಂದು ಉನ್ನತ ಶಿಕ್ಷಣ‌ ಸಚಿವರೂ ಆಗಿರುವ ಡಾ.ಅಶ್ವಥ್ ನಾರಾಯಣ್ ಅವರಿಗೆ ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

English summary
Primary and secondary education Minister S. Suresh Kumar has asked the Department of Preuniversity Education to consider the SSLC marks as well as first PU examination marks while evaluating second PU students. II PU exams were cancelled on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X