ಸಂತ್ರಸ್ತೆಯನ್ನು ಸಾಕ್ಷಿಯನ್ನಾಗಿ ಪರಿಗಣಿಸಿ; ಹೈಕೋರ್ಟ್

ಬೆಂಗಳೂರು, ಮೇ 08; : ಮಹಿಳೆಯರ ವಿರುದ್ಧದ ಅತ್ಯಾಚಾರ ಅಥವಾ ದೌರ್ಜನ್ಯ ಪ್ರಕರಣಗಳಲ್ಲಿ ಬದುಕಿಳಿದ ಸಂತ್ರಸ್ತರನ್ನೇ ಸಾಕ್ಷಿಗಳನ್ನಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಕಲಬುರಗಿ ಪೀಠದಲ್ಲಿ ಬದುಕುಳಿದಿರುವವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿಲ್ಲ ಎಂಬ ಆಧಾರದಲ್ಲಿ ಆರೋಪಿ ಅರ್ಜಿದಾರನಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ರಾಚಯ್ಯ ಅವರಿದ್ದ ಏಕಸದಸ್ಯಪೀಠ, ಒಂದು ವೇಳೆ ಬದುಕುಳಿದವರನ್ನು ಸಾಕ್ಷಿಗಳನ್ನಾಗಿ ಪರಿಗಣಿಸದಿದ್ದರೆ ಪ್ರಕರಣ ತನ್ನ ಮಹತ್ವವನ್ನು ಕಳೆದುಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟಿದೆ.

Consider Victim As Witness Says Karnataka High Court

ಅಲ್ಲದೆ, ಈ ಅತ್ಯಾಚಾರ ಪ್ರಕರಣದಲ್ಲಿ ಬದುಕುಳಿದಿರುವ ಸಂತ್ರಸ್ತೆಯನ್ನು ಸಾಕ್ಷಿಯನ್ನಾಗಿ ಪರಿಗಣಿಸದೆ ತನಿಖಾಧಿಕಾರಿ ತಪ್ಪೆಸಗಿದ್ದು, ಆ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೀದರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ. ಬದುಕುಳಿದಿರುವವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿಲ್ಲ ಎಂಬ ಆಧಾರದಲ್ಲಿ ಆರೋಪಿ ಅರ್ಜಿದಾರನಿಗೆ ಜಾಮೀನು ಮಂಜೂರು ಮಾಡಿದೆ.

ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ, ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಸಾಕ್ಷಿಯನ್ನಾಗಿ ತನಿಖಾಧಿಕಾರಿ ಪರಿಗಣಿಸಿಲ್ಲ. ಹಾಗಾಗಿ ಅರ್ಜಿದಾರನಿಗೆ ವಿಚಾರಣೆ ಎದುರಿಸಲು ಎಂದು ಕೇಳುವುದು ಸೂಕ್ತವಲ್ಲ. ಈ ಕೇಸ್‌ನಲ್ಲಿ ತನಿಖಾಧಿಕಾರಿ ಉದ್ದೇಶಪೂರ್ವಕವಾಗಿಯೋ ಅಥವಾ ಏನೂ ತಪ್ಪು ಎಸಗಿದ್ದಾರೆ.

Consider Victim As Witness Says Karnataka High Court

ಸಂತ್ರಸ್ತೆಯನ್ನು ಆರೋಪಪಟ್ಟಿಯಲ್ಲಿ ಸಾಕ್ಷಿ (ವಿಟ್ನೆಸ್‌)ಆಗಿ ಪರಿಗಣಿಸಿಲ್ಲ. ಹಾಗಾಗಿ ಸಹಜವಾಗಿಯೇ ಆರೋಪಿಗೆ ಅದರ ಅನುಕೂಲ ಸಿಗಲಿದೆ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್‌, ತಪ್ಪೆಸಗಿದ ತನಿಖಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.

ಸಂತ್ರಸ್ತ್ರ ಸಾಕ್ಷಿ ಸಾಕು; ಈ ಹಿಂದೆ ಒಂದು ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಅತ್ಯಾಚಾರ ಪ್ರಕರಣ ಸಾಬೀತಿಗೆ ವೈದ್ಯಕೀಯ ಸಾಕ್ಷ್ಯಕ್ಕಿಂತ ಸಂತ್ರಸ್ತ್ರೆ ಸಾಕ್ಷ್ಯ ನ್ಯಾಯಾಲಯಕ್ಕೆ ವಿಶ್ವಾಸ ಮೂಡಿಸುವಂತಿರಬೇಕು ಎಂದು ಅಭಿಪ್ರಾಯಪಟ್ಟಿತ್ತು. ವೈದ್ಯಕೀಯ ಸಾಕ್ಷ್ಯ ಇಲ್ಲ ಎಂಬ ಕಾರಣಕ್ಕೆ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಿಂದ ಚಿಕ್ಕಮಗಳೂರಿನ ಎಸ್. ರಾಜು ಎಂಬಾತನನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು.

ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌ ಅತ್ಯಾಚಾರ ಪ್ರಕರಣದಲ್ಲಿ ಎಸ್. ರಾಜು ಅಪರಾಧಿ ಎಂದು ತೀರ್ಪು ನೀಡಿತ್ತು. ದೋಷಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಎರಡು ಲಕ್ಷ ರೂ. ದಂಡ ವಿಧಿಸಿತ್ತು, ದಂಡ ಮೊತ್ತವನ್ನು ಸಂತ್ರಸ್ತೆಗೆ ಪಾವತಿಸಲು ವಿಫಲವಾದರೆ ದೋಷಿ ಇನ್ನೂ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+