DCM DK Shivakumar: ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಪಿತೂರಿ ಕೆಲಸ ನಡೆಯುತ್ತಿದೆ: ಡಿ ಕೆ ಶಿವಕುಮಾರ್‌

ಬೆಂಗಳೂರು, ಜುಲೈ24: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

Conspiracy In Singapore To Topple Karnataka Congress Government Said DCM DK Shivakumar

ಇನ್ನೂ ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಹನಿಟ್ರ್ಯಾಪ್ ಮಾಡುತ್ತಾರೆ ಎಂಬ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ವೇಲು ನಾಯ್ಕರ್ ಏನೇನು‌ ಮಾತನಾಡಿದ್ದಾರೋ‌ ಗೊತ್ತಿಲ್ಲ. ಅವರಿಗೆ ಯಾವ ಮಾಹಿತಿ ಇದೆಯೋ, ನಾನು ಸಭೆಗೆ ತಡವಾಗಿ‌ ಹೋಗಿದ್ದೆ ಎಂದು ಹೇಳಿದರು.

ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+