ಸಂವಿಧಾನ ಬದಲಾವಣೆಯ ಒಳಸಂಚು : ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು ಮಾರ್ಚ್ 11: ಬಿಜೆಪಿಯವರಿಗೆ ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಪುನ: ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತಾನಾಡಿದ್ದಾರೆ.

ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರಕ್ಕೆ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಅವರಿಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ. ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ನರೇಂದ್ರ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದರು.
ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಾಲಿ ಸಂಸದರಾಗಿರುವ ಹಿರಿಯ ನಾಯಕರಾದ ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕವಾಗುತ್ತದೆಯೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಸುವಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸ್ಕ್ರೀನಿಂಗ್ ಸಮಿತಿಯ ಸಭೆ ನಡೆಯುತ್ತಿದ್ದು, ಶಿಫಾರಸ್ಸುಗಳನ್ನು ಮಾಡಲಾಗುವುದು. ಇದರ ಬಗ್ಗೆ ತೀರ್ಮಾನವನ್ನು ರಾಷ್ಟ್ರೀಯ ಚುನಾವಣಾ ಸಮಿತಿಯು ಕೈಗೊಳ್ಳುತ್ತದೆ ಎಂದರು.
ಆಹಾರ ಇಲಾಖೆಯ ಸ್ವಂತ ಕಟ್ಟಡ ನಿರ್ಮಿಸಿ, ಒಂದೇ ಸೂರಿನಡಿ ಇಲಾಖೆಯ ಎಲ್ಲ ಕಾರ್ಯಚಟುವಟಿಕೆಗಳು ನಡೆಸುವಂತೆ ಅನುಕೂಲವಗಲು ಇಂದು ಆಹಾರಸೌಧ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಆಹಾರ ಇಲಾಖೆಯಿಂದಲೇ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ಪ್ರಮುಖ ಇಲಾಖೆಗಳಲ್ಲೊಂದಾಗಿದೆ ಎಂದು ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications