ಕಾನ್ಸ್‌ಟೇಬಲ್ ಪರೀಕ್ಷೆ ವೈಫಲ್ಯ: ಯಾರ ರಾಜೀನಾಮೆ ಪಡೆಯುತ್ತೀರಿ ಸಿಎಂ ಡಿ.ಕೆ. ಶಿವಕುಮಾರ್ ಅವರೇ?: ಸಿ ಟಿ ರವಿ

ಬೆಂಗಳೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿನ ಗೊಂದಲ ಹಾಗೂ ವೈಫಲ್ಯಕ್ಕೆ ಹೊಣೆಗಾರರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ವೈಫಲ್ಯಕ್ಕೆ ಯಾರ ರಾಜೀನಾಮೆ ಪಡೆಯುತ್ತೀರಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರೇ? ಎಂದು ವಿಧಾನ ಪರಿಷತ್‌ ಸದಸ್ಯರಾದ ಸಿ ಟಿ ರವಿ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿರುವ ಸಿ ಟಿ ರವಿ ಅವರು, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ವೈಫಲ್ಯಕ್ಕೆ ಯಾರ ರಾಜೀನಾಮೆ ಪಡೆಯುತ್ತೀರಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರೇ? ಕಾಂಗ್ರೆಸ್ ಸರ್ಕಾರ ನಡೆಸಿರುವ ಪ್ರತಿಯೊಂದು ನೇಮಕಾತಿ ಪರೀಕ್ಷೆಯೂ ಗೊಂದಲದ ಗೂಡು, ವೈಫಲ್ಯವೇ ಆಗಿಹೋಗಿದೆ. ಈ ಬಾರಿಯೂ ಯುವ ಜನರ ಭವಿಷ್ಯದೊಡನೆ ರಾಜ್ಯ ಸರ್ಕಾರ ಆಟವಾಡಿದೆ.‌

Constable Recruitment Exam Failure Who Will You Seek Resignation From CM D K Shivakumar Asks C T Ravi

ವರ್ಷಗಟ್ಟಲೆ ನಿರಂತರವಾಗಿ ಪೊಲೀಸ್ ಉದ್ಯೋಗಕ್ಕಾಗಿ ಗ್ರಾಮೀಣ ಭಾಗದ ಯುವಕ ಯುವತಿಯರು ಕಠಿಣ ತರಬೇತಿ, ಅಭ್ಯಾಸ ನಡೆಸಿದ್ದಾರೆ. ಆದರೆ, ಒಎಂಆರ್ ಶೀಟ್ ಗೊಂದಲ, ಅಸಮರ್ಥ ವ್ಯವಸ್ಥೆಗಳಿಂದ ಅವರ ಭವಿಷ್ಯಕ್ಕೆ ತೊಂದರೆಯಾಗಿದೆ. ಅಭ್ಯರ್ಥಿಗಳು ನಡೆಸಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನೀಡಿರುವ ಇನ್ನೊಂದು ಸರ್ಟಿಫಿಕೇಟ್.

ರಾಜ್ಯದ ಗೃಹ ಸಚಿವರು ಬೇರೆಯವರಿಗೆ ಸರ್ಟಿಫಿಕೇಟ್ ಕೊಡುತ್ತಾ, ತನ್ನ ಇಲಾಖೆ ಮಾಡುವ ಕೆಲಸವನ್ನು ಕಡೆಗಣಿಸಿದ್ದರಿಂದ ಇಂತಹ ಸ್ಥಿತಿ ಬಂದಿದೆ. ಒಂದೇ ಒಂದು ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ಸರ್ಕಾರದ ಕೈಯಲ್ಲಿ ಸಾಧ್ಯವಾಗುತ್ತಿಲ್ಲ. ಗೊಂದಲ ಏರ್ಪಟ್ಟ ಕೇಂದ್ರದ ಅಭ್ಯರ್ಥಿಗಳಿಗೆ ವಿಳಂಬವಿಲ್ಲದಂತೆ ಮರು ಪರೀಕ್ಷೆ ನಡೆಸಬೇಕು. ತನಿಖೆ ನಡೆಸಿ,ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳು ರಾಜ್ಯದ ಯುವಕರಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಗೊಂದಲಕ್ಕೆ ಹೊಣೆಗಾರರಾದ ಗೃಹ ಸಚಿವರ ರಾಜೀನಾಮೆ ಪಡೆಯಲಿ ಎಂದು ಸಿ ಟಿ ರವಿ ಅವರು ಆಗ್ರಹಿಸಿದ್ದಾರೆ.

ಇನ್ನೂ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿದ್ದು, ವಿಜಯಪುರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ತೀವ್ರ ಗೊಂದಲ ಹಾಗೂ ಅಭ್ಯರ್ಥಿಗಳ ಪ್ರತಿಭಟನೆಗಳು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮತ್ತೊಂದು ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿ ಒದಗಿಸಿದೆ.

ನಮ್ಮ ಗ್ರಾಮೀಣ ಭಾಗದ ಬಡ, ಮಧ್ಯಮ ವರ್ಗದ ಸಾವಿರಾರು ಯುವಕ-ಯುವತಿಯರು ವರ್ಷಗಟ್ಟಳೆ ಪರಿಶ್ರಮ ಪಟ್ಟು, ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿರುತ್ತಾರೆ. ಆದರೆ ಪರೀಕ್ಷಾ ಕೇಂದ್ರಗಳಲ್ಲಿ OMR ಶೀಟ್‌ಗಳ ಗೊಂದಲ, ಅಸಮರ್ಪಕ ನಿರ್ವಹಣೆಗಳಿಂದ ಅಭ್ಯರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿರುವುದು ತೀವ್ರ ಖಂಡನೀಯ. ಉದ್ಯೋಗಾಕಾಂಕ್ಷಿಗಳ ಜೀವನದ ಅತಿ ಮುಖ್ಯ ಘಟ್ಟದಲ್ಲಿ ಈ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಅದರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.

ಗೃಹ ಇಲಾಖೆ ಹಾಗೂ ರಾಜ್ಯ ಸರ್ಕಾರಕ್ಕೆ ಯುವ ಅಭ್ಯರ್ಥಿಗಳ ಭವಿಷ್ಯಕ್ಕಿಂತ ಬೇರೆ ವಿಷಯಗಳೇ ಮುಖ್ಯವಾದಂತಿದೆ. ಒಂದು ನೇಮಕಾತಿ ಪರೀಕ್ಷೆಯನ್ನೂ ಸುಸೂತ್ರವಾಗಿ, ಪಾರದರ್ಶಕವಾಗಿ, ಸಮರ್ಪಕವಾಗಿ ನಡೆಸಲಾಗದಷ್ಟು ಈ ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ? ಈ ಕೂಡಲೇ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮಧ್ಯಪ್ರವೇಶಿಸಿ, ವಿಜಯಪುರ ಕೇಂದ್ರದ ಗೊಂದಲಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪರೀಕ್ಷಾ ಗೊಂದಲದಿಂದ ಅನ್ಯಾಯಕ್ಕೆ ಒಳಗಾದ ಪ್ರತಿಯೊಬ್ಬ ಅರ್ಹ ಉದ್ಯೋಗಾಕಾಂಕ್ಷಿಗೂ ನ್ಯಾಯ ಸಿಗುವಂತೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸುತ್ತೇನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+