ರಾಜ್ಯದಲ್ಲಿ ಕಲುಷಿತ ನೀರಿನ ಸಮಸ್ಯೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಬೆಂಗಳೂರು, ಜೂನ್ 11: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಲುಷಿತಗೊಂಡಿರುವ ಕುಡಿಯುವ ನೀರು ಪೂರೈಕೆಯಾಗಿ ಜನರು ಸಂಕಷ್ಟು ಅನುಭವಿಸುತ್ತಿರುವ ವಿಷಯ ಇದೀಗ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ, ಅಂತಹ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಅರ್ಜಿಯ ಕುರಿತು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ತುಮಕೂರಿನ ವಕೀಲ ರಮೇಶ್ ಎಲ್. ನಾಯ್ಕ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ನ್ಯಾಯಪೀಠ ಸರ್ಕಾರದ ವಿವಿಧ ಪ್ರಾಧಿಕಾರಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

Contaminated Water Issue High Court Ordered Notice To State

ಅರ್ಜಿದಾರರು ಸ್ವತಃ ವಾದ ಮಂಡಿಸಿದರು. ಅರ್ಜಿಯಲ್ಲಿ ಕುಡಿಯುವ ನೀರನ್ನು ಮಾಲಿನ್ಯ ವಾಗದಂತೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿರುವ ನೀರಿನ ಮೂಲಗಳನ್ನು ಆಗಾಗ್ಗೆ ಪರಿಶೀಲಿಸಬೇಕು.

ಹಳೆಯ ನೀರಿನ ಕೊಳವೆಗಳು ಪರಿಶೀಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಲ್ಲಿ ನಿರ್ದಿಷ್ಟ ಸಂಖ್ಯೆಯ ದಿನಗಳಿಗೊಂಮ್ಮೆ ನೀರು ಸಂಗ್ರಹಿಸುವ ಘಟಕಗಳನ್ನು ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿ ಮಾಡಲಾಗಿದೆ.

35 ಜನರ ಸಾವು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ರಾಯಚೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಎರಡು ವರ್ಷದಲ್ಲಿ 35 ಜನರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಬಾರಿ ಸರ್ಕಾರದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

2022ರ ಜೂನ್ ತಿಂಗಳಲ್ಲಿ ಕಲುಷಿತ ನೀರು ಕುಡಿದು ರಾಯಚೂರು ಪಟ್ಟಣದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಅನೇಕ ಮಂದಿ ಅಸ್ವಸ್ಥರಾಗಿದ್ದರು ಮತ್ತು ಎರಡು ವಾರಗಳ ಕಾಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

2023ರ ಮೇ ತಿಂಗಳಲ್ಲಿ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲ 3 ವರ್ಷದ ಮಗು ಸಾವನ್ನಪ್ಪಿದೆ. 24 ಮಂದಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಹಾಗೂ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗೋರೆಬಾಳ ಗ್ರಾಮದಲ್ಲಿ 25 ಮಂದಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿತ್ತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಶಾಶ್ವತ ಪರಿಹಾರ: 2023ರ ಜುಲೈ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಕಲುಷಿತ ನೀರು ಕುಡಿದ ಹಿನ್ನೆಲೆಯಲ್ಲಿ 6 ಮಂದಿ ಸಾವನ್ನಪ್ಪಿದ್ದರು. ಇದೇ ಕಾರಣಕ್ಕೆ 180 ಮಂದಿ ಆಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದಾಗಿ ವರದಿಯಾಗಿತ್ತು. ಈ ಎಲ್ಲ ಘಟನೆಗಳಲ್ಲಿ ಸರ್ಕಾರವು ಮೃತರಿಗೆ ಪರಿಹಾರವನ್ನು ನೀಡಿ ಕೈತೊಳೆದುಕೊಂಡಿದ್ದಾರೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಂಡಿಲ್ಲ. ಇದರಿಂದಾಗಿ ಘಟನೆ ಪದೇ ಪದೇ ಮರುಕಳಿಸುತ್ತಿದೆ.

ಜೀವನದ ಹಕ್ಕು ಖಾತರಿ ಪಡಿಸುವುದು ಸಂವಿಧಾನದ ಪರಿಚ್ಛೇದ 21ರಂತೆ ಪ್ರಕಾರ ಶುದ್ದ ಮತ್ತು ಸುರಕ್ಷಿತ ಕುಡಿಯುವ ನೀರು ಪಡೆಯುವುದು ಸಹಾ ಸಂವಿಧಾನದ ಹಕ್ಕಾಗಿದೆ. ಅಲ್ಲದೆ. ಎಲ್ಲ ನಾಗರಿಕರಿಗೆ ಶುದ್ದ ಕುಡಿಯುವ ನೀರು ಪಡೆಯುವುದು ಮೂಲಭೂತ ಹಕ್ಕಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಕುಡಿಯುವ ನೀರು ಕಲುಷಿತವಾಗದಂತೆ ನಿಯಂತ್ರಣ ಮಾಡಲು ಸರ್ಕಾರದ ಪ್ರಾಧಿಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ. ಇದೇ ಕಾರಣದಿಂದ ರಾಜ್ಯದಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸುತ್ತಿವೆ. ಇದರಿಂದ ಸಂವಿಧಾನ ಪರಿಚ್ಚೇಧ 21ನೇ ಉಲ್ಲಂಘನೆಗೆ ಕಾರಣವಾಗುತ್ತಿದೆ. ಅಲ್ಲದೆ, ಕಲುಷಿತ ನೀರುನ್ನು ಸರಿಪಡಿಸದ ಹಿನ್ನೆಲೆಯಲ್ಲಿ ರಾಜ್ಯ ಜಲ ನೀತಿ 2022 ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+