ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವತಂತ್ರ ಸಾಕ್ಷಿಯಿಲ್ಲವೆಂಬ ಕಾರಣಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ- ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ನ.25: ಯಾವುದೇ ಆರೋಪ ಪಟ್ಟಿಯಲ್ಲಿ ಸ್ವತಂತ್ರ ಸಾಕ್ಷಿಯನ್ನು ತೋರಿಸಿಲ್ಲವೆಂಬ ಕಾರಣಕ್ಕೆ ಆರೋಪಿ ವಿರುದ್ಧ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲಾಗದು ಎಂದು ಹೈಕೋರ್ಟ್ ಆದೇಶಿಸಿದೆ.

ಮಟ್ಕಾ ಕೇಂದ್ರ ನಡೆಸುವವನಲ್ಲದೆ, ಕೇಂದ್ರದ ಮಾಲೀಕ ಸಹ ಶಿಕ್ಷಾರ್ಹ ವ್ಯಕ್ತಿಯಾಗಿರುತ್ತಾನೆ. ಈ ಪ್ರಕರಣದಲ್ಲಿ ಅರ್ಜಿದಾರನೇ ಮಟ್ಕಾ ಕೇಂದ್ರದ ಮಾಲೀಕನಾಗಿದ್ದಾನೆ. ಅದು ಮೊದಲನೇ ಆರೋಪಿ ಹೇಳಿಕೆಯನ್ನು ಒಪ್ಪಿಕೊಳ್ಳಬಹುದೋ ಅಥವಾ ಬೇಡವೋ ಎಂಬುದನ್ನು ವಿಚಾರಣಾ ನ್ಯಾಯಾಲಯದ ವಿಚಾರಣೆ ವೇಳೆ ನಿರ್ಧರಿಸಬೇಕಿದೆ.

ಇಂತಹ ಸಂದರ್ಭದಲ್ಲಿ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಯಾವುದೇ ಸ್ವಾತಂತ್ರ್ಯ ಸಾಕ್ಷಿಯನ್ನು ತೋರಿಸಿಲ್ಲ ಎಂಬ ಕಾರಣಕ್ಕೆ ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಟ್ಕಾ ನಡೆಸುತ್ತಿದ್ದ ಆರೋಪ ಸಂಬಂಧ ತಮ್ಮ ವಿರುದ್ಧದ ವಿಚಾರಣೆ ರದ್ದು ಪಾವಗಡ ಪಟ್ಟಣ ರಾಮಾಂಜಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಈ ಆದೇಶ ಮಾಡಿದೆ.

Contention of no independent witness is not a reason to quash case: HC

"ಪೊಲೀಸರು ಮಟ್ಕಾ ಚೀಟಿ, ಅದನ್ನು ಬರೆದುಕೊಟ್ಟ ಬಾಲ್ ಪೆನ್ ಮತ್ತು 4,180 ರು. ನಗದು ವಶಪಡಿಸಿಕೊಂಡಿದ್ದಾರೆ. ಮೊದಲನೇ ಆರೋಪಿ ವಿಚಾರಣೆ ವೇಳೆ ನೀಡಿದ ಹೇಳಿಕೆ ಪ್ರಕಾರ, ಎರಡನೇ ಆರೋಪಿಯಾದ ಅರ್ಜಿದಾರನೇ ಮಟ್ಕಾ ಕೇಂದ್ರದ ಮಾಲೀಕನಾಗಿದ್ದೇನೆ. ಆತನೆ ನನಗೆ ಹಣ ನೀಡಿದ ಎಂದು ತಿಳಿಸಿದ್ದರು. ಅದರ ಆಧಾರದ ಮೇಲೆ ಪೊಲೀಸರು, ವಿಚಾರಣಾ ನ್ಯಾಯಾಯಲಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ'' ಎಂದು ನ್ಯಾಯಪೀಠ ತಿಳಿಸಿದೆ

ಅರ್ಜಿದಾರ ಪರ ವಕೀಲರು, ಪ್ರಕರಣವನ್ನು ಪೊಲೀಸರು ಸೂಕ್ತವಾಗಿ ತನಿಖೆ ನಡೆಸಿಲ್ಲ. ತಮಗೆ ನೋಟಿಸ್ ಜಾರಿ ಮಾಡಿಲ್ಲ ಹಾಗೂ ವಿಚಾರಣೆ ಸಹ ನಡೆಸಿಲ್ಲ. ಆದರೂ ಮೊದಲನೇ ಆರೋಪಿಯ ಹೇಳೀಕೆ ಆಧರಿಸಿ ಅರ್ಜಿದಾರನ ವಿರುದ್ಧ ಅದರೂ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆ ಯಾರು ನಡೆಸಬೇಕು ಎಂಬುದಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರ್ದಿಷ್ಟವಾಗಿ ಹೇಳಿಲ್ಲ. ಎಫ್‌ಐಆರ್ ದಾಖಲಿಸಿದ ಕೇವಲ ಆರು ದಿನದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದರು.

ಅಲ್ಲದೆ, ಅರ್ಜಿದಾರ ಮಟ್ಕಾ ನಡೆಸುತ್ತಿದ್ದ ಎಂಬುದನ್ನು ಸಾಬೀತುಪಡಿಸುವ ಯಾವುದೇ ಸ್ವತಂತ್ರ ಸಾಕ್ಷಿಯನ್ನು ದೋಷಾರೋಪ ಪಟ್ಟಿಯಲ್ಲಿ ತೋರಿಸಿಲ್ಲ. ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 78(3) ಪ್ರಕಾರ ಯಾರು ಮಟ್ಕಾ ನಡೆಸುತ್ತಿರುವ ಜಾಗದಲ್ಲಿದ್ದುಕೊಂಡು ಆಟ ಆಡುತ್ತಿರುತ್ತಾರೋ ಅವರು ಶಿಕ್ಷೆಗೆ ಅರ್ಹರಾಗಿರುತ್ತಾರೆ.

ಆದರೆ, ಅರ್ಜಿದಾರ ಸ್ಥಳದಲ್ಲಿಯೇ ಇರಲಿಲ್ಲ. ಆತನಿಗೂ ಮೊದಲನೆ ಆರೋಪಿಗೆ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ಅರ್ಜಿದಾರ ವಿರುದ್ಧ ವಿಚಾರಣೆ ನಡೆಸುತ್ತಿರುವುದು ಕಾನೂನು ಪ್ರಕ್ರಿಯೆ ದುರ್ಬಳಕೆಯಾಗಿದೆ ಎಂದು ಕೋರಿದ್ದರು.

Contention of no independent witness is not a reason to quash case: HC

ಪ್ರಕರಣದ ಹಿನ್ನೆಲೆ: ಖಚಿತ ಮಾಹಿತಿ ಆಧರಿಸಿ ಪಾವಗಡ ಠಾಣಾ ಪೊಲೀಸರು, 2021ರ ಸೆ.27ರಂದು ಮಟ್ಕಾ ನಡೆಯುತ್ತಿದ್ದ ಸ್ಥಳವೊಂದರ ಮೇಲೆ ದಾಳಿ ನಡೆಸಿದ್ದರು. ದಾಳಿ ನಡೆಸಿದ ನಂತರ ಗ್ರಾಹಕರು ಸ್ಥಳದಿಂದ ಪರಾರಿಯಾಗಿದ್ದು, ಮೊದಲನೆ ಆರೋಪಿ ಸಿಕ್ಕಿಬಿದ್ದಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಹಣ ಮತ್ತು ಮಟ್ಕಾ ಆಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಿದ್ದರು.

ಮಟ್ಕಾ ನಡೆಸುತ್ತಿದ್ದ ಆರೋಪದ ಮೇಲೆ ಅರ್ಜಿದಾರರ ವಿರುದ್ಧ ಪಾವಗಡ ಠಾಣಾ ಪೊಲೀಸರು, ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 78(3) ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದರು.

ಬಳಿಕ ತನಿಖೆ ಪೂರ್ಣಗೊಳಿಸಿ ಪಾವಗಡ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿ, ಅರ್ಜಿದಾರರನ್ನು ಎರಡನೇ ಆರೋಪಿಯನ್ನಾಗಿ ಮಾಡಿದ್ದರು. ಹಾಗಾಗಿ, ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಲು ಕೋರಿ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿದ್ದ.

English summary
If Police have not cited any independent witness in the charge sheet, Contention of no independent witness is not a reason to quash case ruled Karnataka High court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X