ಉಡುಪಿ-ಚಿಕ್ಕಮಗಳೂರಿನಿಂದ ಕಣಕ್ಕಿಳಿಯಲು ಅಣ್ಣಾಮಲೈಗೆ ಸಲಹೆ!

ಬೆಂಗಳೂರು, ಮಾರ್ಚ್ 01; ಕರ್ನಾಟಕದಲ್ಲಿ ಐಪಿಎಸ್‌ ಅಧಿಕಾರಿಯಾಗಿ ಕೆಲಸ ಮಾಡಿದ್ದ ಕೆ. ಅಣ್ಣಾಮಲೈ ರಾಜ್ಯದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಅವರು ಬಿಜೆಪಿಯಲ್ಲಿದ್ದಾರೆ. ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ಗೆ ಕೆ. ಅಣ್ಣಾಮಲೈ ಪ್ರಯತ್ನ ನಡೆಸಲಿ ಎಂದು ಸಲಹೆಯೊಂದನ್ನು ನೀಡಲಾಗಿದೆ. ಈ ಕ್ಷೇತ್ರದ ಹಾಲಿ ಸಂಸದರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ.

ಮಾಜಿ ಪೊಲೀಸ್‌ ಅಧಿಕಾರಿ ಅನುಪಮಾ ಶೆಣೈ ಈ ಕುರಿತು ಟ್ವೀಟ್ ಮೂಲಕ ಕೆ. ಅಣ್ಣಾಮಲೈಗೆ ಸಲಹೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದ ಅನುಪಮಾ ಶೆಣೈ ಭಾರತೀಯ ಜನಶಕ್ತಿ ಕಾಂಗ್ರೆಸ್‌ ಪಕ್ಷವನ್ನು ಸ್ಥಾಪನೆ ಮಾಡಿದ್ದರು.

ಅನುಪಮಾ ಶೆಣೈ ಟ್ವೀಟ್‌ನಲ್ಲಿ, 'ಈ ಅಣ್ಣಾಮಲೈ ಸುಮ್ನೆ BJPಯಲ್ಲಿ time waste ಮಾಡುವ ಬದಲು DMKನೋ, AIADMKನೋ ಸೇರುವುದು ಒಳ್ಳೆಯದು. ಮುಂದಿನ ಬಾರಿ ತಮಿಳಿಗರೂ ಕೂಡ ಕೇರಳಿಗರಂತೆ BJPಗೆ ಶೂನ್ಯ ಸೀಟ್ ನೀಡಲಿದ್ದಾರೆ. BJPಯಲ್ಲೇ ಮುಂದುವರೆಯುವುದಾದರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗೆ ಪ್ರಯತ್ನಿಸುವುದು ಸೂಕ್ತ' ಎಂದು ಸಲಹೆ ನೀಡಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿದ ಕೆ. ಅಣ್ಣಾಮಲೈ ರಾಜ್ಯ ರಾಜಕೀಯಕ್ಕೆ ಆಗಮಿಸಲಿದ್ದಾರೆಯೇ? ಕಾದು ನೋಡಬೇಕಿದೆ.

4 ಸೀಟು ಗೆದ್ದಿರುವ ಬಿಜೆಪಿ

4 ಸೀಟು ಗೆದ್ದಿರುವ ಬಿಜೆಪಿ

2021ರ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮೊದಲು ಕೆ. ಅಣ್ಣಾಮಲೈ ಬಿಜೆಪಿ ಸೇರಿದ್ದರು. ಆಗ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 4 ಸ್ಥಾನಗಳಲ್ಲಿ ಜಯಗಳಿಸಿತ್ತು.

ಅಣ್ಣಾಮಲೈ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅರಾವಕುರಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದರು. 68 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಅವರು ಸೋಲು ಅನುಭವಿಸಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ

ಚುನಾವಣೆ ಸೋಲಿನ ಬಳಿಕ ಟ್ವೀಟ್ ಮಾಡಿದ್ದ ಅವರು, "ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಹಲವು ಸೋಲುಗಳನ್ನು ನೋಡಿದ್ದೇನೆ. ಗೆಲುವಿನ ನಿರೀಕ್ಷೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ" ಎಂದು ಹೇಳಿದ್ದರು. ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಕಳೆದ ವಾರ ನಡೆದ ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳಲ್ಲಿ ಗೆದ್ದು 3ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಣ್ಣಾಮಲೈ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ಅನುಪಮಾ ಶೆಣೈ ಟ್ವೀಟ್

ಅನುಪಮಾ ಶೆಣೈ, 'ಮುಂದಿನ ಬಾರಿ ತಮಿಳಿಗರೂ ಕೂಡ ಕೇರಳಿಗರಂತೆ ಬಿಜೆಪಿಗೆ ಶೂನ್ಯ ಸೀಟ್ ನೀಡಲಿದ್ದಾರೆ. ಬಿಜೆಪಿಯಲ್ಲೇ ಮುಂದುವರೆಯುವುದಾದರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ಗೆ ಪ್ರಯತ್ನಿಸುವುದು ಸೂಕ್ತ' ಎಂದು ಕೆ. ಅಣ್ಣಾಮಲೈಗೆ ಸಲಹೆ ನೀಡಿದ್ದಾರೆ.

2024ಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದ್ಯ ಬಿಜೆಪಿಯ ವಶದಲ್ಲಿಯೇ ಇದೆ. ಹಾಲಿ ಸಂಸದರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ.

ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ

ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ

2011ನೇ ಬ್ಯಾಚ್ ಐಪಿಎಸ್ ಅಧಿಕಾರಿ ಅಣ್ಣಾಮಲೈ 2019ರ ಮೇ 28ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. 2016ರಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅವರು ಕರ್ನಾಟಕದ ಸಿಘಂ ಎಂದೇ ಖ್ಯಾತಿ ಪಡೆದಿದ್ದರು.

ಕಾರ್ಕಳ, ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಕೆಲಸ ಮಾಡಿರುವ ಕೆ. ಅಣ್ಣಾಮಲೈ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಅವರಿಗೆ ಸಲಹೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+