ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 14 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿಯನ್ನು ಸಹ ಮಾಡಲಾಗಿದೆ.

ಕೋವಿಡ್ ಸೋಂಕು ನಿಭಾಯಿಸಲು ಸಲುವಾಗಿಯೇ ಇಲಾಖೆಯು ಪ್ರತಿ ಜಿಲ್ಲೆಯಲ್ಲಿ 45 ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿತ್ತು. ಇವರ ಸೇವೆಯನ್ನು ಆರು ತಿಂಗಳ ಕಾಲ ಮುಂದುವರೆಸಲು ಆದೇಶ ಹೊರಡಿಸಲಾಗಿದೆ.

ಇಸ್ರೋ ನೇಮಕಾತಿ 2020: 55 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಇಸ್ರೋ ನೇಮಕಾತಿ 2020: 55 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ

18 ಜಿಲ್ಲಾ ಮಟ್ಟದ ಆಸ್ಪತ್ರೆಗಳನ್ನು ಬಲಪಡಿಸಲು ಮತ್ತು ಸಮರ್ಪಕವಾದ ವೈದ್ಯಕೀಯ ಸೇವೆಯನ್ನು ನೀಡಲು ಸಿಬ್ಭಂದಿಯನ್ನು ಆರು ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ಈಗ ಅವರ ಸೇವೆಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ.

 ಮೈಸೂರು ಮಹಾನಗರ ಪಾಲಿಕೆಯಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ ಮೈಸೂರು ಮಹಾನಗರ ಪಾಲಿಕೆಯಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Contract Basis Workers Service Extended Till Six Months

ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕವಾದ ಎಲ್ಲಾ ಸಿಬ್ಬಂದಿಗಳ ಸೇವೆಯನ್ನು 6 ತಿಂಗಳ ಅವಧಿಗೆ ಮುಂದುವರಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ

ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ 10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗ ಶಾಲಾ ತಂತ್ರಜ್ಞರು, 10 ಡಿ ಗ್ರೂಪ್ ನೌಕರರನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಅವರ ಸೇವೆಯನ್ನು ಡಿಸೆಂಬರ್ 31ರ ತನಕ ಮುಂದುವರೆಸಲು ಆದೇಶ ಮಾಡಲಾಗಿದೆ.

Recommended Video

Congress ಶಾಲಿಗೆ ಬೆಲೆ ಇಲ್ಲಾ ಅನ್ನೋದು ಗೊತ್ತಾಗಿದೆ | Oneindia Kannada

ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕವಾದವರು ಇನ್ನು ಆರು ತಿಂಗಳು ಕಾರ್ಯ ನಿರ್ವಹಣೆ ಮಾಡಬಹುದಾಗಿದೆ.

English summary
Karnataka health and family welfare department decided to continue the service of doctor, nurse and lab technician till 6 months who appointed on contract basis in the time of COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X