ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ: ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆ

|
Google Oneindia Kannada News

ಬೆಂಗಳೂರು, ಏ. 12: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಅವರ ಬೆಂಗಳೂರು ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಿನ್ನೆಲೆಯಲ್ಲಿ ಗಾಂಧಿಭವನ ರಸ್ತೆಯಲ್ಲಿರುವ ಕೆ.ಎಸ್. ಈಶ್ವರಪ್ಪ ಅವರ ಮನೆ ಬಳಿ ಬಿಗಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎಎಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Contractor Santhosh Suicide Case: Police Forces Deployed to Minister Eswarappa House

ಈಶ್ವರಪ್ಪ ಅವರ ಶಿವಮೊಗ್ಗ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ಬೆಂಗಳೂರು ಸರ್ಕಾರಿ ನಿವಾಸದ ಮುಂದೆ ಸಹ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

vContractor Santhosh Suicide Case: Police Forces Deployed to Minister Eswarappa House

ಈಶ್ವರಪ್ಪ ರಾಜೀನಾಮೆಗೆ ಚಿಂತನೆ:

ಈ ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ನಡೆದಾಗ ಗೃಹ ಸಚಿವರಾಗಿದ್ದ ಕೆ.ಜೆ. ಜಾರ್ಜ್ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಇದೀಗ ಕೆ.ಎಸ್. ಈಶ್ವರಪ್ಪ ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಕೂಗು ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈಶ್ವರಪ್ಪ ಅವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Contractor Santhosh Suicide Case: Police Forces Deployed to Minister Eswarappa House

ಆತ್ಮಹತ್ಯೆ ಮುನ್ನ ಡೆತ್ ನೋಟ್ ಸಂದೇಶ ರವಾನಿಸಿದ್ದಾರೆ. ಆದರೆ, ಪೊಲೀಸರು ಈ ಸಂಬಂಧ ಎಫ್ಐಆರ್ ದಾಖಲಿಸಿದರೂ ಈಶ್ವರಪ್ಪ ಅವರ ಪಾತ್ರದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ತೀರ್ಮಾನಕ್ಕೆ ಬರಲು ಚಿಂತನೆ ನಡೆಸಿದ್ದಾರೆ. ಬಿಜೆಪಿಯ ಪ್ರಭಾವಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನನಗೆ ಸಂತೋಷ್ ಪಾಟೀಲ್ ಗೊತ್ತಿಲ್ಲ. ನೀವು ಹೇಳಿದ ಮೇಲೆಯೇ ನನಗೆ ಗೊತ್ತಾಗುತ್ತಿರುವುದು ಎಂದು ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದರು.

English summary
Santhosh suicide case: Congress workers protest in front of the Eswarappa house and demand for resign know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X