ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ: ರಾಜಕೀಯ ಗಣ್ಯರಿಂದ ಸಂತಾಪ

ಬೆಂಗಳೂರು, ಸೆಪ್ಟೆಂಬರ್‌ 19: ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಶೇ.40 ಪರ್ಸೆಂಟ್ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದ ಡಿ.ಕೆಂಪಣ್ಣ (83) ಅವರು ಗುರುವಾರ ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.

Contractors Association President Kempanna passed away Condolences From Dignitaries

ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು."ಕೆಂಪಣ್ಣ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ನೋವುಂಟುಮಾಡಿದೆ. ಸದಾ ಕ್ರಿಯಾಶೀಲರಾಗಿ ಇರುತ್ತಿದ್ದ ಅವರ ಸಾವು ಗುತ್ತಿಗೆದಾರರ ಹೋರಾಟ ಮತ್ತು ದನಿಗೆ ತುಂಬಲಾರದ ನಷ್ಟ ಎಂದು ಡಿ ಕೆ ಶಿವಕುಮಾರ್‌ ತಿಳಿದ್ದಾರೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿರುದ್ಧ ದನಿ ಎತ್ತಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ಇಳಿ ವಯಸ್ಸಿನಲ್ಲೂ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದ್ದರು. ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲವಾಗಿದ್ದ ಕೆಂಪಣ್ಣ ಅವರು ನನ್ನ ಬಳಿ ಗುತ್ತಿಗೆದಾರರ ಸಮಸ್ಯೆಗಳನ್ನು ಇಟ್ಟುಕೊಂಡು ಅನೇಕ ಬಾರಿ ಚರ್ಚೆ ನಡೆಸಿದ್ದರು.

ಈ ಹಿರಿಯ ಜೀವದ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ, ಬಂಧು, ಬಳಗದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನೂ ಮಾಜಿ ಸಂಸದ ಡಿ ಕೆ ಸುರೇಶ್‌ ಸಂತಾಪ ಸೂಚಿಸಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಣ್ಣನವರು ನಿಧನರಾದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಿ, 40% ಕಮಿಷನ್‌ ಹಗರಣವನ್ನು ಬಯಲಿಗೆಳೆದಿದ್ದ ಕೆಂಪಣ್ಣನವರು ಸದಾ ಪ್ರಾಮಾಣಿಕವಾಗಿ, ನ್ಯಾಯಪರವಾಗಿ ಕೆಲಸ ಮಾಡಿದವರು. ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ನೀಡಲಿ, ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+