BREAKING: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ
ಬೆಂಗಳೂರು, ಸೆಪ್ಟೆಂಬರ್, 19: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (85) ಇಂದು (ಸೆಪ್ಟೆಂಬರ್ 19) ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಂಪಣ್ಣ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇನ್ನು ಅವರು ಬಸವರಾಜ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕೂಡ ಕವಿಷನ್ ಆರೋಪ ಮಾಡಿದ್ದರು. ಹೀಗೆ ಗುತ್ತಿಗೆದಾರರ ಪರ ಹೋರಾಟ ನಡೆಸಿಕೊಂಡು ಬಂದಿದ್ದರು.

ಯಾವುದೇ ಬಿಲ್ ಪಾಸ್ ಆಗಬೇಕೆಂದರೂ ಕೂಡ ಸರ್ಕಾರದ ಅಧಿಕಾರಿಗಳು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಹೋರಾಟಕ್ಕಿಳಿದಿದ್ದರು. ಇನ್ನು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಪೇ ಸಿಎಂ ಅಭಿಯಾನವನ್ನು ಆರಂಭಿಸಿದ್ದರು.












Click it and Unblock the Notifications