ಕಿಡಿಗೇಡಿಗಳಿಂದ ಸಿಎಂ ಸಿದ್ದರಾಮಯ್ಯ ಸಾವು ಬಯಸಿ ಫೇಸ್‌ಬುಕ್‌ ಪೋಸ್ಟ್‌

CM Siddaramaiah: ಉದ್ಯೋಗ ಇಲ್ಲದ ಬಡಗಿ ಅದನ್ನು ಕೆತ್ತಿದನಂತೆ ಎಂಬ ಮಾತಿದೆ. ಅದರಂತೆಯೇ ಕೆಲಸ ಇಲ್ಲದ ಕೆಲವರು ಫೇಸ್‌ಬುಕ್‌ ಪೋಸ್ಟರ್‌ಗಳಿಗೆ ಕೆಟ್ಟದಾಗಿ ಕಾಮೆಂಟ್‌ ಮಾಡುವ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಹಾಗೆಯೇ, ಇದೀಗ ಕಿಡಿಗೇಡಿಗಳು ಸಿಎಂ ಸಿದ್ದರಾಮಯ್ಯ ಅವರ ಸಾವು ಬಯಸಿ ಪಜೀತಿಗೆ ಸಿಲುಕುಕೊಂಡ ಘಟನೆ ನಡೆದಿದೆ.

ಫೇಸ್‌ಬುಕ್‌ನ ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಾವು ಬಯಸಿದ್ದ ಕಿಡಿಗೇಡಿಗಳ ವಿರುದ್ಧ ದೂರು ದಾಖಲು ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಕಾಮೆಂಟ್ ಮಾಡಿದ್ದ ಕಿಡಿಗೇಡಿಗಳು ಸಿದ್ದರಾಮಯ್ಯ ಬೇಗ ಸಾಯಪ್ಪಾ ಎಂದು ಬರೆದಿದ್ದರು. ಆದ್ದರಿಂದ ಇಂತಹ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್‌ ಬೆಂಗಳೂರು ಪಶ್ಚಿಮ ಜಿಲ್ಲಾ ಉಪಾಧ್ಯಕ್ಷ ಸೇರಿದಂತೆ ಹಲವರು ದೂರು ದಾಖಲಿಸಿದ್ದು, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Controversial facebook post against CM Siddaramaiah by Miscreants

ದೂರಿನಲ್ಲಿ ಏನಿದೆ?: ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳು ಮಾಡುವ ಅಪಪ್ರಚಾರದ ಸುಳ್ಳು ವದಂತಿ ಮತ್ತು ದಿಕ್ಕು ತಪ್ಪಿಸುವ ಹೇಳಿಕೆಗಳಿಂದ ರಾಜ್ಯದ ಜನರಿಗೆ ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳ ಮನಸಿಗೆ ನೋವು ಉಂಟಾಗಿರುತ್ತದೆ. ಇದರಿಂದ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬಿರುವುದು ಹಾಗೂ ಶಾಂತಿ ಕದಡುವ ಇಂತಹವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿನ್ನೆ ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಕುರಿತ ಸುದ್ದಿಯ ಪೋಸ್ಟ್‌ಗೆ ಕಿಡಿಗೇಡಿಗಳು ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಸೇರಿದಂತೆ ಹಲವರು ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ.

ಸಿಎಂ ಸಿದ್ದು ಪರ ವಾಟಾಳ್‌ ನಾಗರಾಜ್‌ ಬ್ಯಾಟಿಂಗ್‌: ಮತ್ತೊಂದೆಡೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಇದು ರಾಜ್ಯ ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಈ ವಿವಾರದಲ್ಲಿ ಹೈಕಮಾಂಡ್​ ಮಧ್ಯಪ್ರವೇಶಿಸಿದ ಬಳಿಕ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಇನ್ನೂ ಬಗ್ಗೆ ರಾಮನಗರದಲ್ಲಿ ಮಾತಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌, ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಅವರಿಗೇನೆ ಕೆಟ್ಟದಾಗುತ್ತೆ ಎಂದು ಹೇಳಿದರು. ಅಲ್ಲದೆ, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಒಬ್ಬ ಮುತ್ಸದ್ದಿ, ಹಿರಿಯ ವ್ಯಕ್ತಿ ಇವತ್ತಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಅನಿರ್ವಾಯ ಆಗಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+