ಸಿದ್ದು ವಿರುದ್ಧ ವಿವಾದಾತ್ಮಕ ಹೇಳಿಕೆ: ಶಾಸಕರ ವಿರುದ್ಧದ ತನಿಖೆಗೆ ತಡೆ

ಬೆಂಗಳೂರು ಜೂನ್ 10: ಮುಖ್ಯಮಂತ್ರಿ ಸಿದ್ದರಾಮಯ್ಯ 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆಂಬ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಬಂಧನ ಭೀತಿ ಎದುರಿಸುತ್ತಿದ್ದ ಅವರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹಾಗಾಗಿ ಸದ್ಯ ಅವರು ಬಂಧನ ಭೀತಿಯಿಂದ ಪಾರಾಗಿರುವುದು ಅಲ್ಲದೆ, ತನಿಖೆಯನ್ನೂ ಸಹ ಎದುರಿಸುವಂತಿಲ್ಲ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

Controversial statment against CM Siddu: HC stayed investigation against MLA Harsih Poonja

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರು, 2023ರ ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅರ್ಜಿದಾರರು ಈ ವಿವಾದಿತ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಎರಡು ದಿನಗಳ ಬಳಿಕ ವಿಳಂಬವಾಗಿ ಅಂದರೆ ಮೇ 24ರಂದು ದೂರು ದಾಖಲಿಸಲಾಗಿದೆ. ಅರ್ಜಿದಾರರು ನೀಡಿದ ಹೇಳಿಕೆಯಿಂದ ಯಾವುದೇ ಹಿಂಸಾಚಾರ ಅಥವಾ ಶಾಂತಿಭಂಗ, ಕೋಮುಸೌಹಾರ್ದತೆಕ್ಕೆ ಧಕ್ಕೆಯಾದ ಪ್ರಕರಣ ನಡೆದಿಲ್ಲ. ಅರ್ಜಿದಾರರು ಆಡಳಿತ ಪಕ್ಷದ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಸೋಲಿಸುತ್ತಿದ್ದರು. ಹಾಗಾಗಿ, ರಾಜಕೀಯ ಪ್ರೇರಿತ, ದುರುದ್ದೇಶ ಮತ್ತು ದ್ವೇಷಭಾವನೆಯಿಂದ ದೂರು ದಾಖಲಿಸಿದ್ದಾರೆ ಎಂದು ಹೇಳಿದರು.

ಅಲ್ಲದೆ, ಪೊಲೀಸರು ಸಹ ಆಡಳಿತ ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಎಫ್‌ಐಆರ್ ದಾಖಲಿಸಿದ್ದಾರೆ. ಇದು ಕಾನೂನುಬಾಹಿರ ಮತ್ತು ಸಂವಿಧಾನದ ಪರಿಚ್ಛೇದ 14 ಮತ್ತು 21 ಅಡಿಯಲ್ಲಿ ಕಲ್ಪಿಸಿರುವ ಮಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಕರಣದ ಹಿನ್ನೆಲೆ:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜಾ ಜಯ ಸಾಧಿಸಿದ್ದರು. ಇದರಿಂದ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನ ಜೈನ್ ಪಟೇಲ್ ಸಭಾಂಗಣದಲ್ಲಿ 2024ರ ಮೇ 22 ರಂದು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ? ' ಸತ್ಯಣ್ಣ, 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಮತ ಕೇಳಿದ್ದೀರಲ್ಲಾ? ಹಿಂದೂ ಹುಡುಗಿಯನ್ನು ಪ್ರೀತಿಸಿದ್ದ ಮುಸ್ಲಿಂ ಹುಡುಗನಿಗೆ ಹಿಂದೂ ಹುಡುಗನೊಬ್ಬ ಹಲ್ಲೆ ಮಾಡಿದ್ದ. ಗೋವುಗಳನ್ನು ಸಾಗಿಸುತ್ತಿದ್ದವರಿಗೆ ಹಿಂದೂ ಯುವಕರು ತಡೆದು ಹಲ್ಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ನಾನು ಠಾಣೆಗೆ ಹೋಗಿ ಅವರ ಮೇಲೆ ಕೇಸ್ ದಾಖಲಾಗದಂತೆ ನೋಡಿಕೊಂಡು ಠಾಣೆಯಿಂದ ಬಿಡಿಸಿಕೊಂಡು ಬಂದಿದ್ದೇನೆ' ಎಂದು ಹೇಳಿಕೆ ನೀಡಿದ್ದರು.

ಅದನ್ನು ಆಧರಿಸಿ ನಮಿತಾ ಕೆ.ಪೂಜಾರಿ ಎಂಬುವರು ಬೆಳ್ತಂಗಡಿ ಠಾಣಗೆ ದೂರು ನೀಡಿ, ಹರೀಶ್ ಪೂಂಜಾ ಶಾಸಕನಾಗಿದ್ದುಕೊಂಡು ಕೋಮು ಪ್ರಚೋದಕ ಸಂವಿಧಾನ ಬಾಹಿರ ಹೇಳಿಕೆ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಮಧ್ಯೆ ದ್ವೇಷ ಉಂಟು ಮಾಡಬೇಕು ಹಾಗೂ ಶಾಂತಿ ಕದಡಬೇಕು ಎಂಬ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು, ಭಾರತೀಯ ದಂಡ ಸಂಹಿತೆ ಐಪಿಸಿ ೧೫೩, ೧೫೩(ಎ) ೫೦೫ ಮತ್ತು ೫೦೫(ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+