ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಮೀಸಲಾತಿ: ಹೈಕೋರ್ಟ್ ಅಂಗಳಕ್ಕೆ ವಿವಾದ

ಬೆಂಗಳೂರು, ಜುಲೈ 25: ಕರ್ನಾಟಕದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯ ಕರ್ನಾಟಕ ಸರ್ಕಾರ ಈ ಕುರಿತ ತೀರ್ಮಾನಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಆದರೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲು ವಿಚಾರ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಜೊತೆಗೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಅಂಗಳವನ್ನು ತಲುಪಿದೆ.

Controversy On Reservation For Kannadigas Reached High Court

ಕರ್ನಾಟಕದಲ್ಲಿ ಕೈಗಾರಿಕೆಗಳು-ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಆಗಸ್ಟ್ 7ಕ್ಕೆ ನಿಗದಿಪಡಿಸಲಾಗಿದೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ ಲೆಕ್ಕ ಪರಿಶೋಧಕಿ ಆರ್‌. ಅರ್ಮಿತಲಕ್ಷ್ಮೀ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬುಧವಾರ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತು. ಅರ್ಜಿದಾರ ಪರ ವಕೀಲರು, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಆ.7ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ಅರ್ಜಿದಾರರ ಆಕ್ಷೇಪವೇನು?: ಕರ್ನಾಟಕ ರಾಜ್ಯದ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಮೀಸಲಾತಿ ಕಲ್ಪಿಸುವ ಮಸೂದೆ-2024ರ ಕರಡು ನಿಯಮಗಳನ್ನು ಕಾರ್ಮಿಕ ಇಲಾಖೆಯು 2024ರ ಜು.11ರಂದು ಹೊರಡಿಸಿದೆ.

ಈ ನಿಯಮಗಳಿಗೆ ಜು.16ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ, ಇದೀಗ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದು ಬಾಕಿಯಿದೆ. ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಯು ಸಂವಿಧಾದ 19 (1) (ಡಿ), 19 1 (ಇ), ಜಿ ಮತ್ತು 14ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಅಲ್ಲದೆ, ಈ ಮಸೂದೆ ಅನುಷ್ಠಾನಗೊಂಡಲ್ಲಿ ಇದು ಸಹಜ ನ್ಯಾಯತತ್ವಗಳ ಉಲ್ಲಂಘನೆಯಾಗುತ್ತದೆ. ಈ ಕಾಯ್ದೆಯನ್ನು ಜಾರಿಗೊಳಿಸುವ ಸಾಮರ್ಥ್ಯವನ್ನು ರಾಜ್ಯವು ಶಾಸಕಾಂಗ ಹೊಂದಿಲ್ಲ. ಒಂದೊಮ್ಮೆ ಈ ಮಸೂದೆ ಜಾರಿಗೆ ಬಂದಲ್ಲಿ ರಾಜ್ಯದ ಕೈಗಾರಿಕಾ ವಲಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಹಲವು ಸಾಂವಿಧಾನಿಕ ಪ್ರಶ್ನೆಗಳಿಗೆ ಎಡೆಮಾಡಿಕೊಡುತ್ತದೆ. ಕೆಟ್ಟ ಪರಂಪರೆಗೂ ನಾಂದಿ ಹಾಡಿದಂತಾಗುತ್ತದೆ ಎಂದು ಆಕ್ಷೇಪಿಸಿರುವ ಅರ್ಜಿದಾರರು, ಉದ್ದೇಶಿತ ಮಸೂದೆಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಹಲವು ಐಟಿ ಕಂಪನಿಗಳು, ವಾಣಿಜ್ಯೋದ್ಯಮಿಗಳು, ಗಣ್ಯರು ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಕುರಿತು ವಿಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸರ್ಕಾರ ಈ ಕುರಿತು ಮಸೂದೆ ಮಂಡನೆ ಮಾಡಲು ತಾತ್ಕಾಲಿಕ ತಡೆ ನೀಡಿದೆ, ಸಚಿವ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಲಾಗುತ್ತದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+