ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸಚಿವರ ಸ್ಥಾನಮಾನ?
ಬೆಂಗಳೂರು, ಜೂನ್ 24 : ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ಸಚಿವರ ಸ್ಥಾನಮಾನ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಮನ್ವಯ ಸಮಿತಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರು.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಎರಡೂ ಪಕ್ಷಗಳ ನಡುವೆ ಸಮನ್ವಯ ಸಾಧಿಸಲು ಸಮನ್ವಯ ಸಮಿತಿಯನ್ನು ರಚನೆ ಮಾಡಲಾಗಿದೆ. ಐದು ಸದಸ್ಯರ ಸಮನ್ವಯ ಸಮಿತಿಯ ಮೊದಲ ಸಭೆ ಈಗಾಗಲೇ ನಡೆದಿದೆ.
ಕರ್ನಾಟಕ ಸರ್ಕಾರ ಈಗ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸಚಿವರ ಸ್ಥಾನಮಾನ ನೀಡಲು ಮುಂದಾಗಿದೆ. ಸೋಮವಾರ ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರು. ವಿಧಾನಸಭೆಯಲ್ಲಿ ಆಡಳಿತ ಪಕ್ಷದ ನಾಯಕರು. ಈಗಾಗಲೇ ಅವರಿಗೆ ವಿಧಾನಸೌಧದಲ್ಲಿ ಕೊಠಡಿಯನ್ನು ನೀಡಲಾಗಿದೆ. ಈಗ ಕ್ಯಾಬಿನೆಟ್ ದರ್ಜೆ ಮಾನ್ಯತೆ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಸಿದ್ದರಾಮಯ್ಯ, ಪರಮೇಶ್ವರ ಭೇಟಿ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ತೆರಳಿದರು. ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
30 ನಿಗಮ ಮಂಡಳಿಗಳ ನೇಮಕಾತಿಗಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರ ಪಟ್ಟಿಯನ್ನು ಹಿಡಿದುಕೊಂಡು ಪರಮೇಶ್ವರ ಅವರು ಧರ್ಮಸ್ಥಳಕ್ಕೆ ತೆರಳಿದರು. ಸಂಜೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ, ಪರಮೇಶ್ವರ ಅವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.












Click it and Unblock the Notifications