ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಭೇಟಿ ಮಾಡಿ ಸೋಲಿನ ಕಾರಣ ಕೊಟ್ಟ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಜೂನ್ 19 : ದೆಹಲಿಯಲ್ಲಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ರಾಹುಲ್ ಭೇಟಿಯಾಗಿ ಎರಡು ದಿನದಿಂದ ಸಿದ್ದರಾಮಯ್ಯ ಅವರು ಕಾದು ಕುಳಿತಿದ್ದರು.

ಬುಧವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು. ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಅವರು, ರಾಜ್ಯ ರಾಜಕೀಯದ ಬಗ್ಗೆ ಮಾತುಕತೆ ನಡೆಸಿದರು.

ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಗೆ ಸೂಚನೆಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಗೆ ಸೂಚನೆ

ಲೋಕಸಭಾ ಚುನಾವಣೆ ಸೋಲಿನ ಬಗ್ಗೆ ವಿವರಣೆ ನೀಡಿದ ಸಿದ್ದರಾಮಯ್ಯ ಅವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಎರಡೂ ಪಕ್ಷಗಳಿಗೆ ಹಿನ್ನಡೆ ಆಯಿತು ಎಂಬುದನ್ನು ರಾಹುಲ್ ಗಾಂಧಿ ಅವರಿಗೆ ವಿವರಿಸಿದರು.

ಕುತೂಹಲ ಕೆರಳಿಸಿದ ಮಾಜಿ ಸಿದ್ದರಾಮಯ್ಯ ದೆಹಲಿ ಭೇಟಿ!ಕುತೂಹಲ ಕೆರಳಿಸಿದ ಮಾಜಿ ಸಿದ್ದರಾಮಯ್ಯ ದೆಹಲಿ ಭೇಟಿ!

Coordination committee chief Siddaramaiah meets Rahul Gandhi

ಕೆಲವು ದಿನಗಳ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ರಾಹುಲ್ ಗಾಂಧಿ ಭೇಟಿಯಾಗಿದ್ದರು. ಕರ್ನಾಕಟದಲ್ಲಿ ಕಾಂಗ್ರೆಸ್ ಸಹಕಾರ ನೀಡದಿದ್ದರೆ ಮೈತ್ರಿ ಸರ್ಕಾರ ನಡೆಸುವುದು ಕಷ್ಟ ಎಂದು ರಾಹುಲ್ ಬಳಿಕ ದೂರು ಹೇಳಿದ್ದರು.

ಕಾಂಗ್ರೆಸ್‌ನಿಂದ ರೋಷನ್ ಬೇಗ್ ಅಮಾನತು, ಯಾರು ಏನು ಹೇಳಿದರು?ಕಾಂಗ್ರೆಸ್‌ನಿಂದ ರೋಷನ್ ಬೇಗ್ ಅಮಾನತು, ಯಾರು ಏನು ಹೇಳಿದರು?

ಸಿದ್ದರಾಮಯ್ಯ ಅವರು ಇಂದು ರಾಜ್ಯದ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಅವರಿಗೆ ವಿವರಣೆ ನೀಡಿದರು. ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಮಾಹಿತಿ ನೀಡಿದರು.

ಸಿದ್ದರಾಮಯ್ಯ ಅವರು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿದ್ದು, ಹೈಕಮಾಂಡ್‌ನ ವಿವಿಧ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಗಳ ಫಲ ಎಂಬಂತೆ ಕೆಪಿಸಿಸಿಯನ್ನು ಪುನಾರಚನೆ ಮಾಡಲು ಎಐಸಿಸಿ ಇಂದು ಸೂಚನೆ ನೀಡಿದೆ.

English summary
Karnataka former Chief Minister Siddaramaiah met the AICC president Rahul Gandhi on June 19, 2019. Siddaramaiah in New Delhi from past two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X