ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುರುವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ

|
Google Oneindia Kannada News

ಬೆಂಗಳೂರು, ಜನವರಿ 23 : ಕರ್ನಾಟಕ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಗುರುವಾರ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಗುರುವಾರ ಸಂಜೆ 5 ಗಂಟೆಗೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತಿದೆ. ಹಲವು ದಿನಗಳ ಬಳಿಕ ಸಭೆ ನಡೆಯುತ್ತಿದ್ದು, ಬಜೆಟ್ ಅಧಿವೇಶನ, ಆಪರೇಷನ್ ಕಮಲದ ವಿಚಾರವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ : ಕೊಪ್ಪಳಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ!ಲೋಕಸಭಾ ಚುನಾವಣೆ : ಕೊಪ್ಪಳಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ!

Coordination committee meeting on January 24

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಸಕಾಂಗ ಸಭೆಗೆ ಗೈರಾದವರಿಗೆ ಸಿದ್ದರಾಮಯ್ಯ ನೋಟಿಸ್!ಶಾಸಕಾಂಗ ಸಭೆಗೆ ಗೈರಾದವರಿಗೆ ಸಿದ್ದರಾಮಯ್ಯ ನೋಟಿಸ್!

ಜನವರಿ 18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ಸಿದ್ದರಾಮಯ್ಯ ಅವರ ಬಳಿ ಶಾಸಕರು ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಜೆಟ್‌ನಲ್ಲಿ ವಿವಿಧ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್‌ಗೆಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್‌ಗೆ

ಆನಂದ್ ಸಿಂಗ್ ಮೇಲೆ ಜೆ.ಎನ್.ಗಣೇಶ್ ಹಲ್ಲೆ ನಡೆಸಿದ ಪ್ರಕರಣ, ಆಪರೇಷನ್ ಕಮಲ, ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯರ ನೇಮಕ, ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

English summary
The coordination committee meeting of Congress-JD(S) coalition government in Karnataka will be held on January 24, 2019. Meeting will be chaired by Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X