ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ
ನವದೆಹಲಿ, ಏಪ್ರಿಲ್ 11: ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸತತ ಮೂರ್ನಾಲ್ಕು ಗಂಟೆಗಳ ಕಾಲ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಮ್ಮ ನಿರ್ಧಾರವೂ ಇದೇ ಆಗಿತ್ತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರತಿ ಎರಡು ದಿನಗಳಿಗೊಮ್ಮೆ 2 ಲಕ್ಷ ಮಾಸ್ಕ್, ಕೊರೊನಾ ಪ್ರಯೋಗಾಲಯಗಳ ಸಂಖ್ಯೆಯನ್ನು 300ಕ್ಕೆ ಹೆಚ್ಚಿಸಲಾಗುತ್ತದೆ. ಎಲ್ಲಾ ಮುಖ್ಯಮಂತ್ರಿಗಳು ಪಕ್ಷಬೇಧ ಮರೆತು ಕೊರೊನಾಗಾಗಿ ಹೋರಾಡಬೇಕು ಎಂದು ಮೋದಿ ಹೇಳಿದ್ದಾರೆ.
ಮೀನುಗಾರಿಕೆ ಹಾಗೂ ಮೀನು ಸಂಸ್ಕರಣಾ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗಳಿಗೆ ವಸ್ತುಗಳು ಮಾರಾಟವಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ಲಾಕ್‌ಡೌನ್ ಸಡಿಲಗೊಳಿಸಬಾರದು, 15ದಿನ ಲಾಕ್‌ಡೌನ್ ಅನಿವಾರ್ಯ ಒಂದೆರೆಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ತಿಳಿಸುವುದಾಗಿ ಮೋದಿ ಹೇಳಿರುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.
ಲಾಕ್‌ಡೌನ್ ಮಾರ್ಗಸೂಚಿಯ ಬಗ್ಗೆ ಒಂದೆರೆಡು ದಿನಗಳಲ್ಲಿ ತಿಳಿಸುವುದಾಗಿ ಮೋದಿ ಹೇಳಿದ್ದಾರೆ. ಆದರೆ ಈ ಬಾರಿಯ ಲಾಕ್‌ಡೌನ್ ವಿಭಿನ್ನವಾಗಿದೆ. ಭಾಗಶಃ ಸರ್ಕಾರಿ ಕಚೇರಿಗಳನ್ನು ತೆರೆಯಲು ಅನುಮತಿ ನೀಡಲಾಗುತ್ತದೆ.
ಅದಕ್ಕೂ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಮುಂದಿನ ಮೂರ್ನಾಲ್ಕು ವಾರ ಭಾರತದ 130 ಕೋಟಿ ಜನರಿಗೆ ಅತಿ ಮುಖ್ಯವಾದ ವಾರವಾಗಲಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications