ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೊರೊನಾ ವೈರಸ್: 469 ಮಂದಿಗೆ ಗೃಹ ದಿಗ್ಬಂಧನ

|
Google Oneindia Kannada News

ಬೆಂಗಳೂರು, ಮಾರ್ಚ್.06: ಜಾಗತಿಕ ಮಟ್ಟದಲ್ಲಿ ಸಂಚಲನ ಸೃಷ್ಟಿಸಿರುವ ಕೊರೊನಾ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿದ್ದು ಆಗಿದೆ. ಕರ್ನಾಟಕದಲ್ಲೂ ಕೆಲವರಿಗೆ ಸೋಂಕು ತಗಲಿರುವ ಲಕ್ಷಣಗಳು ಪತ್ತೆಯಾಗಿದ್ದು, ಸರ್ಕಾರವು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಕರ್ನಾಟಕದಲ್ಲಿ 717 ಜನರಲ್ಲಿ ಕೊರೊನಾ ವೈರಸ್ ರೋಗದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. 28 ದಿನ ಐಸೋಲೆಡೆಟ್ ಘಟಕದಲ್ಲಿ ಇರಿಸಿ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಕೊರೊನಾ ಕಂಟಕ: ಭಾರತದ ನಿರ್ಧಾರದಿಂದ ಯುರೋಪ್ ರಾಷ್ಟ್ರಗಳಲ್ಲಿ ಆತಂಕಕೊರೊನಾ ಕಂಟಕ: ಭಾರತದ ನಿರ್ಧಾರದಿಂದ ಯುರೋಪ್ ರಾಷ್ಟ್ರಗಳಲ್ಲಿ ಆತಂಕ

ಕೊರೊನಾ ವೈರಸ್ ರೋಗದ ಲಕ್ಷಣಗಳು ಕಾಣಿಸಿಕೊಂಡ 717 ಮಂದಿ ಪೈಕಿ 236 ಜನರಲ್ಲಿ ಮಾರಕ ರೋಗದ ಸೋಂಕು ಪತ್ತೆಯಾಗಿಲ್ಲ ಎಂದು ಸರ್ಕಾರವೇ ಸ್ಪಷ್ಟಪಡಿಸಿದೆ. ಇದರ ಜೊತೆಗೆ ಉಳಿದ 469 ಜನರನ್ನು ದಿಗ್ಬಂಧನದಲ್ಲಿ ಇರಿಸಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ತಪಾಸಣೆ ಬಳಿಕ 296 ಮಂದಿ ಕೊರೊನಾ ಮುಕ್ತ

ವೈದ್ಯಕೀಯ ತಪಾಸಣೆ ಬಳಿಕ 296 ಮಂದಿ ಕೊರೊನಾ ಮುಕ್ತ

ರಾಜ್ಯದಲ್ಲಿ ಕೊರೊನಾ ವೈರಸ್ ಗುಣಲಕ್ಷಣಗಳು ಕಾಣಿಸಿಕೊಂಡ ಶಂಕಿತರ ರಕ್ತದ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಿ ಕೊಡಲಾಗಿತ್ತು. ಈ ಪೈಕಿ 296 ಜನರ ರಕ್ತ ತಪಾಸಣೆ ಬಳಿಕ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ವರದಿ ಬಂದಿದೆ. ಇದುವರೆಗೂ ಕರ್ನಾಟಕದಲ್ಲಿ ಒಂದೇ ಒಂದು ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ 8 ಮಂದಿ ಸೋಂಕಿತ ಶಂಕಿತರು ಆಸ್ಪತ್ರೆಗೆ ದಾಖಲು

ಕರ್ನಾಟಕದಲ್ಲಿ 8 ಮಂದಿ ಸೋಂಕಿತ ಶಂಕಿತರು ಆಸ್ಪತ್ರೆಗೆ ದಾಖಲು

ಇನ್ನು, ಕೊರೊನಾ ವೈರಸ್ ತಗಲಿರುವ ಶಂಕೆ ಹಿನ್ನೆಲೆಯಲ್ಲಿ 8 ಮಂದಿಯನ್ನು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿನ ತುರ್ತು ನಿಗಾ ಘಟಕದಲ್ಲಿ ಇರಿಸಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಐಸೋಲೆಡೆಟ್ ಘಟಕದಲ್ಲಿ ಚಿಕಿತ್ಸೆಗೊಳಪಡುವ ಸೋಂಕಿತರ ಮೇಲೆ ತೀವ್ರ ಕಣ್ಗಾವಲು ಇಡಲಾಗಿದೆ.

ಅಮೆರಿಕಾ To ಭೂತಾನ್: ಇದು ಕೊರೊನಾ ವೈರಸ್ ಹೊತ್ತು ತಂದವರ ಕಥೆಅಮೆರಿಕಾ To ಭೂತಾನ್: ಇದು ಕೊರೊನಾ ವೈರಸ್ ಹೊತ್ತು ತಂದವರ ಕಥೆ

ಮಾಸ್ಕ್ ಖರೀದಿಸಲು ಮುಗಿಬೀಳುತ್ತಿರುವ ಜನರು

ಮಾಸ್ಕ್ ಖರೀದಿಸಲು ಮುಗಿಬೀಳುತ್ತಿರುವ ಜನರು

ಕೊರೊನಾ ವೈರಸ್ ನಿಂದ ಪಾರಾಗಲು ಜನರು ಮಾಸ್ಕ್ ಗಳ ಮೊರೆ ಹೋಗುತ್ತಿದ್ದಾರೆ. ದಿನನಿತ್ಯ ಮಾಸ್ಕ್ ಧರಿಸಿಕೊಂಡು ಮೆಟ್ರೋ, ಬಿಎಂಟಿಸಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ. ಇನ್ನೊಂದಡೆ ಇದರ ಲಾಭ ಪಡೆಯಲು ದುಬಾರಿ ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ದುಪ್ಪಟ್ಟು ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶಾದ್ಯಂತ 31 ಕೊರೊನಾ ವೈರಸ್ ಪ್ರಕರಣಗಳು ಪತ್ತೆ

ದೇಶಾದ್ಯಂತ 31 ಕೊರೊನಾ ವೈರಸ್ ಪ್ರಕರಣಗಳು ಪತ್ತೆ

ಭಾರತದಲ್ಲಿ ಇದುವರೆಗೂ 31 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆ. ಜೈಪುರ್ ಅತಿಹೆಚ್ಚು ಅಂದರೆ 17 ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಪ್ರದೇಶದ ಆಗ್ರಾದಲ್ಲಿ 6 ಮಂದಿಗೆ ಸೋಂಕು ತಗಲಿರುವ ಬಗ್ಗೆ ತಿಳಿದು ಬಂದಿದೆ. ದೆಹಲಿ ಮತ್ತು ಎನ್ಆರ್ ಸಿ ಪ್ರದೇಶದಲ್ಲಿ 4 ಸೋಂಕಿತ ಪ್ರಕರಣಗಳ ಇರುವ ಬಗ್ಗೆ ವರದಿಯಾಗಿದೆ. ಕೇರಳದಲ್ಲಿ 3 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈಗ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇನ್ನೊಂದೆಡೆ ತೆಲಂಗಾಣದಲ್ಲಿ ಇದುವರೆಗೂ ಒಂದು ಕೊರೊನಾ ವೈರಸ್ ಸೋಂಕಿತ ಪ್ರಕರಣವು ಪತ್ತೆಯಾಗಿದೆ.

ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊರೊನಾ ವೈರಸ್ ಬಗ್ಗೆ ವಿಜ್ಞಾನಿಗಳು ಹೇಳುವುದೇನು?ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊರೊನಾ ವೈರಸ್ ಬಗ್ಗೆ ವಿಜ್ಞಾನಿಗಳು ಹೇಳುವುದೇನು?

English summary
Coronavirus: 469 Persons Are Continuing Under Home Quarantine In Karnataka. Karnataka Government Clarification About 8 Peoples Admitted In Isolation Hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X