ಸಿಇಟಿಗೂ ತಟ್ಟಿದ ಕೊರೊನಾ ಬಿಸಿ; ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, ಮಾರ್ಚ್ 30: ಕೊರೊನಾ ಸೋಂಕಿನ ಬಿಸಿ ಶಾಲಾ-ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಏಪ್ರಿಲ್ನಲ್ಲಿ ನಡೆಯಬೇಕಿದ್ದ 2020ನೇ ಸಾಲಿನ ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಈ ಕುರಿತು ಸೋಮವಾರ ಮಾಹಿತಿ ನೀಡಿದರು. "ಸಿಇಟಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ" ಎಂದು ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉನ್ನತ ಶಿಕ್ಷಣ ಸಚಿವರು ಈ ತೀರ್ಮಾನ ಪ್ರಕಟಿಸಿದ್ದಾರೆ. ಏಪ್ರಿಲ್ 22 ಮತ್ತು 23ರಂದು ಈ ಬಾರಿಯ ಸಿಇಟಿ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಯಾಗಿತ್ತು.
ಕಲಬುರಗಿ; ಕೋವಿಡ್-19 ಪರೀಕ್ಷೆ, 35 ಜನರಿಗೆ ಕೊರೋನಾ ವೈರಸ್ ಇಲ್ಲ
ಕೊರೊನಾ ಹರಡದಂತೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಆದ್ದರಿಂದ, ದ್ವಿತೀಯ ಪಿಯುಸಿಯ ಇನ್ನೂ ಒಂದು ಭಾಷೆಯ ಪರೀಕ್ಷೆ ಬಾಕಿ ಇದೆ. ಹಾಗಾಗಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಬಿಟ್ಟು ಉಳಿದೆಲ್ಲರೂ ಪರೀಕ್ಷೆ ಇಲ್ಲದೆ ಪಾಸ್
ಏಪ್ರಿಲ್ 3ನೇ ವಾರದಲ್ಲಿ ಸಿಇಟಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಮುಂದೆ ಪರೀಕ್ಷೆ ನಡೆಯುವ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕದಲ್ಲಿ ದ್ವೀತಿಯ ಪಿಯುಸಿ ಒಂದು ಭಾಷೆಯ ಪರೀಕ್ಷೆ ಬಾಕಿ ಇದೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ಇನ್ನು ಆರಂಭವಾಗಿಲ್ಲ. ಶಿಕ್ಷಕರಿಗೆ ರಜೆ ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.