ಕರ್ನಾಟಕದಲ್ಲಿ ಯಾವ ಯಾವ ಜಿಲ್ಲೆಗಳು ಲಾಕ್ ಡೌನ್?
ಬೆಂಗಳೂರು, ಜುಲೈ.12: ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕನ್ನಡಿಗರು ಬೆಚ್ಚಿ ಬೀಳುವಂತಾ ವಾತಾವರಣ ಸೃಷ್ಟಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 2627 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 38843ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮಹಾಮಾರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳ ಜೊತೆಗೆ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೊದಲ ಸಭೆ ನಡೆಯಲಿದ್ದು ಮೊದಲಿಗೆ ಕೊರೊನಾವೈರಸ್ ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಚರ್ಚಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಅತಿಕಡಿಮೆ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಜಿಲ್ಲೆಗಳ ಡಿಸಿಗಳ ಜೊತೆಗೆ ಮಾತುಕತೆ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಮೊದಲ ವಿಡಿಯೋ ಕಾನ್ಫರೆನ್ಸ್:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೀದರ್, ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಿರುವ ಸಿಎಂ ಜಿಲ್ಲೆಯಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೊನಾವೈರಸ್ ಸೋಂಕು ಕಡಿಮೆ ಇರುವ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ, ಎರಡು ಸಭೆ ಬಳಿಕ ಯಾವ್ಯಾವ ಜಿಲ್ಲೆಗಳನ್ನು ಲಾಕ್ಡೌನ್ ಮಾಡಬೇಕು ಎಂದು ನಿರ್ಧರಿಸಲಿದ್ಧಾರೆ. ಅಲ್ಲದೇ, ಲಾಕ್ಡೌನ್ ನಿಯಮಗಳು ಹೇಗಿರಬೇಕು ಎಂಬ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications