ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಯಾವ ಯಾವ ಜಿಲ್ಲೆಗಳು ಲಾಕ್ ಡೌನ್?

|
Google Oneindia Kannada News

ಬೆಂಗಳೂರು, ಜುಲೈ.12: ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕನ್ನಡಿಗರು ಬೆಚ್ಚಿ ಬೀಳುವಂತಾ ವಾತಾವರಣ ಸೃಷ್ಟಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 2627 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 38843ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮಹಾಮಾರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳ ಜೊತೆಗೆ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ.

ಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಇಲ್ಲಿವೆ ಶಿಸ್ತುಕ್ರಮಗಳುಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಇಲ್ಲಿವೆ ಶಿಸ್ತುಕ್ರಮಗಳು

ಬೆಳಗ್ಗೆ 11 ಗಂಟೆಗೆ ಮೊದಲ ಸಭೆ ನಡೆಯಲಿದ್ದು ಮೊದಲಿಗೆ ಕೊರೊನಾವೈರಸ್ ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಚರ್ಚಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಅತಿಕಡಿಮೆ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಜಿಲ್ಲೆಗಳ ಡಿಸಿಗಳ ಜೊತೆಗೆ ಮಾತುಕತೆ ನಡೆಸಲಿದ್ದಾರೆ.

Coronavirus: Chief Minister B S Yediyurappa Video Conference With DC And Senior Officers

ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!

ಬೆಳಗ್ಗೆ 11 ಗಂಟೆಗೆ ಮೊದಲ ವಿಡಿಯೋ ಕಾನ್ಫರೆನ್ಸ್:

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೀದರ್, ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಿರುವ ಸಿಎಂ ಜಿಲ್ಲೆಯಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೊನಾವೈರಸ್ ಸೋಂಕು ಕಡಿಮೆ ಇರುವ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ, ಎರಡು ಸಭೆ ಬಳಿಕ ಯಾವ್ಯಾವ ಜಿಲ್ಲೆಗಳನ್ನು ಲಾಕ್​ಡೌನ್ ಮಾಡಬೇಕು ಎಂದು ನಿರ್ಧರಿಸಲಿದ್ಧಾರೆ. ಅಲ್ಲದೇ, ಲಾಕ್​ಡೌನ್ ನಿಯಮಗಳು ಹೇಗಿರಬೇಕು ಎಂಬ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದಾರೆ.

English summary
Coronavirus: Chief Minister B S Yediyurappa Video Conference With DC And Senior Officers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X