ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್‌ ನೆಟ್‌ ಯೋಜನೆ: ದೇಶದ ಮೂಲೆ ಮೂಲೆಯಿಂದ ವರ್ಕ್‌ ಪ್ರಮ್!

|
Google Oneindia Kannada News

ಬೆಂಗಳೂರು, ಏ. 29: ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿಗೆ ಬಂದು 36 ದಿನಗಳಾಗಿವೆ. ಎರಡನೇ ಹಂತದ ಬಳಿಕ ಇದೀಗ ಮೂರನೇ ಹಂತದ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಜನಪ್ರೀಯವಾಗಿದ್ದ ವರ್ಕ್ ಫ್ರಮ್ ಹೋಮ್ ಸೌಲಭ್ಯವನ್ನು ಸಾಧ್ಯವಾದಷ್ಟು ಕ್ಷೇತ್ರಗಳಿಗೆ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮನೆಯಿಂದ ಕೆಲಸ ಮಾಡಲು ಬಹುಮುಖ್ಯವಾಗಿ ಅತ್ಯುತ್ತಮ ಇಂಟರ್‌ನೆಟ್ ಸೌಲಭ್ಯ ಅಗತ್ಯ. ಹೀಗಾಗಿ ಅದಕ್ಕೂ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

ಜಗತ್ತಿನಲ್ಲಿಯೆ ಎರಡನೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿರುವ ಭಾರತದಲ್ಲಿ ಲಾಕ್‌ಡೌನ್‌ನ್ನು ಮತ್ತೆ ಮತ್ತೆ ವಿಸ್ತರಣೆ ಮಾಡುವುದು ಕಷ್ಟಸಾಧ್ಯ. ಆರ್ಥಿಕವಾಗಿ ಬೀಳುವ ಹೊಡೆತಗಳು ಕೊರೊನಾ ವೈರಸ್‌ಗಿಂದ ಭೀಕರವಾಗಲಿವೆ. ಹೀಗಾಗಿ ವರ್ಕ್‌ ಫ್ರಮ್ ಹೋಮ್ ಸೌಲ್ಯಭವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಜೊತೆಗೆ ಐಟಿ ವಲಯಕ್ಕು ಕೂಡ ಕೇಂದ್ರ ಸರ್ಕಾರ ಹೊಸ ಸೂಚನೆ ಕೊಟ್ಟಿದೆ.

ಐಟಿ ವಲಯಕ್ಕೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ ಐಟಿ ವಲಯಕ್ಕೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ

ಭಾರತ್‌ ನೆಟ್‌ ಯೋಜನೆ

ಭಾರತ್‌ ನೆಟ್‌ ಯೋಜನೆ

ಕೊವಿಡ್‌ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು ಎಂದು ಕೆಂದ್ರ ಸಚಿವ ರವಿಶಂಕರ್​ ಪ್ರಸಾದ್ ತಿಳಿಸಿದ್ದಾರೆ.

ಐಟಿ ವಲಯ ಮಾತ್ರವಲ್ಲದೆ, ಎಲ್ಲ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್‌ಅಪ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇ-ಆಡಳಿತ, ಇ-ಪಾಸ್‌ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ, ಕೊವಿಡ್ ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲ ವಲಯಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ. 80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದೆ. ಇದಕ್ಕೆ ಅನುಕೂಲವಾಗುವಂತೆ ಭಾರತ್‌ ನೆಟ್‌ ಯೋಜನೆ ಮೂಲಕ ದೇಶದ ಮೂಲೆಮೂಲೆಗೂ ಇಂಟರ್ನೆಟ್ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ ಅವರು ಭರಸವೆ ಕೊಟ್ಟಿದ್ದಾರೆ.

ಜುಲೈ 31ರ ವರೆಗೆ ವರ್ಕ್‌ ಫ್ರಮ್‌ ಹೋಮ್‌

ಜುಲೈ 31ರ ವರೆಗೆ ವರ್ಕ್‌ ಫ್ರಮ್‌ ಹೋಮ್‌

ಕೊವಿಡ್ ಹಿನ್ನೆಲೆಯಲ್ಲಿ ಐಟಿ ವಲಯ ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಲಾಕ್‌ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿಶಂಕರ್​ ಪ್ರಸಾದ್​ ಅವರು ಇದನ್ನು ಸೂಚಿಸಿದ್ದಾರೆ.

ಲಾಕ್‌ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್‌ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್‌ ಫ್ರಮ್ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮೇಕ್ ಇನ್‌ ಇಂಡಿಯಾ

ಮೇಕ್ ಇನ್‌ ಇಂಡಿಯಾ

ಮೇಕ್ ಇನ್‌ ಇಂಡಿಯಾ ಯೋಜನೆಗಳ ಕಾರ್ಯರೂಪಕ್ಕೆ ಇದು ಸಕಾಲ. ಕೊವಿಡ್ ನಂತರದಲ್ಲಿ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಮೇಕ್ ಇನ್‌ ಇಂಡಿಯಾ ಯೋಜನೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ನಾವು ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದರೂ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದಕ್ಕೂ ಮೊದಲು ದೇಶದಲ್ಲಿ ಇದ್ದ ಮೊಬೈಲ್‌ ಉತ್ಪಾದಕ ಸಂಸ್ಥೆಗಳ ಸಂಖ್ಯೆ 2 ರಿಂದ 268ಕ್ಕೆ ಏರಿದೆ. ಮೇಕ್ ಇನ್‌ ಇಂಡಿಯಾ ಯೋಜನೆ ಯಶಸ್ಸಿಗೆ ಇದು ಅತ್ಯುತ್ತಮ ಉದಾಹರಣೆ ಎಂದರು.

ಆನ್‌ಲೈನ್‌ ಆರೋಗ್ಯ ಸೇವೆ

ಆನ್‌ಲೈನ್‌ ಆರೋಗ್ಯ ಸೇವೆ

ಕೊವಿಡ್ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದ್ದು ಆನ್‌ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್‌ಲೈನ್‌ ಆರೋಗ್ಯ ಸೇವೆ ಉತ್ತಮವಾಗಿದ್ದು, ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು ಎಂದರು.

ಆಪ್ತ ಮಿತ್ರ ಹೆಲ್ಪ್‌ಲೈನ್‌

ಆಪ್ತ ಮಿತ್ರ ಹೆಲ್ಪ್‌ಲೈನ್‌

ಶಿಕ್ಷಣ, ಅಗತ್ಯ ವಸ್ತುಗಳ ಪೂರೈಕೆ ಮುಂತಾದ ಹಲವು ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಡಿಸಿಎಂ ಡಾ. ಅಶ್ವಥ್‌ ನಾರಾಯಣ ವೀಡಿಯೋ ಕಾನ್ಫರೆನ್ಸ್‌ನಲ್ಲಿ ವಿವರಿಸಿದರು.

500ಕ್ಕೂ ಹೆಚ್ಚು ವೃತ್ತಿಪರರು ಆಪ್ತ ಮಿತ್ರ ಹೆಲ್ಪ್‌ಲೈನ್‌ನ ಕಾಲ್‌ ಸೆಂಟರ್‌ನಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ನಿತ್ಯ ಸುಮಾರು 50 ಸಾವಿರ ಕರೆಗಳನ್ನು ಸ್ವೀಕರಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಇ-ಕಾಮರ್ಸ್‌ಗೆ ಪರ್ಯಾಯವಾದ ವ್ಯವಸ್ಥೆ ಕಂಡುಕೊಂಡಿದ್ದು, ರೆಡ್‌ಜೋನ್‌ನಲ್ಲಿರುವ ಜನ ಮನೆಯಿಂದ ಹೊರ ಬರುವ ಅಗತ್ಯ ಬಾರದಂತೆ ಎಲ್ಲ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗುತ್ತಿದೆ. ದಿನಸಿ, ಹಾಲು, ಔಷಧ, ತರಕಾರಿ ಮುಂತಾದ ವಸ್ತುಗಳನ್ನು ಮನೆಗೆ ತಲುಪಿಸಲು ವಿಧಿಸುತ್ತಿರುವ ದರ ಕೇವಲ 10 ರೂಪಾಯಿ. ಒಂದೇ ರೀತಿಯ ಸೇವೆ (ಪರಿಹಾರ ಸಾಮಗ್ರಿಗಳು) ಬೇರೆ ಬೇರೆ ಇಲಾಖೆಗಳಿಂದ ಪುನರಾವರ್ತನೆ ಆಗದಂತೆ ತಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ

English summary
In the wake of Kovid, the central government has instructed the IT employees to work from home till next July 31. The next decision would be taken after taking care of the situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X