ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಕಾಲದಲ್ಲಿ ಕರ್ನಾಟಕದ ಈ 20 ನಗರಗಳ ಬಗ್ಗೆ ಹುಷಾರ್!

|
Google Oneindia Kannada News

ಬೆಂಗಳೂರು, ಜುಲೈ 29: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಬಗ್ಗೆ ಕರ್ನಾಟಕದ 20 ನಗರಗಳಲ್ಲಿ ಜನರು ಜಾಗೃತಿ ವಹಿಸಬೇಕಿದೆ. ನಿಮ್ಮದೇ ನಗರದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ನಿಮಗೆ ಅರಿವಿಲ್ಲದೇ ವರದಿಯಾಗುತ್ತಿವೆ. ಕಳೆದ ಒಂದು ವಾರದಲ್ಲಿ ಲಭ್ಯವಾದ ಅಂಕಿ-ಅಂಶಗಳಲ್ಲಿ ರಾಜ್ಯದ ಯಾವ 20 ನಗರಗಳು ಡೇಂಜರಸ್ ಎಂಬುದನ್ನು ಪಟ್ಟಿ ಮಾಡಲಾಗಿದೆ.

ಕರ್ನಾಟಕದ ಅತ್ಯಂತ ಅಪಾಯಕಾರಿ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರಗಳು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿವೆ. ಏಳು ದಿನಗಳಲ್ಲಿ ನೆಲಮಂಗಲದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.188.9ರಷ್ಟು ಹೆಚ್ಚವಾಗಿದ್ದರೆ, ಅನೇಕಲ್ ನಗರದಲ್ಲಿ ಶೇ.131.3ರಷ್ಟು ಏರಿಕೆಯಾಗಿದೆ.

ರಾಜ್ಯದ ಎಲ್ಲರಿಗೂ ಯಾವ ಕಾಲಮಿತಿಯಲ್ಲಿ ಕೊರೊನಾ ಲಸಿಕೆ ನೀಡುತ್ತೀರಿ: ಹೈಕೋರ್ಟ್ ಪ್ರಶ್ನೆರಾಜ್ಯದ ಎಲ್ಲರಿಗೂ ಯಾವ ಕಾಲಮಿತಿಯಲ್ಲಿ ಕೊರೊನಾ ಲಸಿಕೆ ನೀಡುತ್ತೀರಿ: ಹೈಕೋರ್ಟ್ ಪ್ರಶ್ನೆ

ಕಳೆದ ನಾಲ್ಕು ವಾರಗಳಲ್ಲಿ ನೆಲಮಂಗಲದಲ್ಲಿ 58 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದರೆ, ಅನೇಕಲ್ ನಲ್ಲಿ 130 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಆದರೆ ಏಳು ದಿನದಲ್ಲಿ ನೆಲಮಂಗಲ 17, ಅನೇಕಲ್ 21 ಪ್ರಕರಣಗಳು ವರದಿಯಾಗಿವೆ. ಅನೇಕಲ್ ಮತ್ತು ನೆಲಮಂಗಲದಲ್ಲಿ ಕೊರೊನಾವೈರಸ್ ಸ್ಥಿತಿಗತಿ ಹೇಗಿತ್ತು, ಈಗ ಹೇಗಾಗಿದೆ. ರಾಜ್ಯದಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸುತ್ತಿರುವ 20 ನಗರಗಳು ಯಾವುವು ಎನ್ನುವುದರ ಕುರಿತು ಒಂದು ವಿಸ್ತೃತ ವರದಿ ಇಲ್ಲಿದೆ ಓದಿ.

ದಿನಕ್ಕೆ 1300 ಹೊಸ ಪ್ರಕರಣ ವರದಿ ಮಾಡುತ್ತಿದ್ದ ನಗರ

ದಿನಕ್ಕೆ 1300 ಹೊಸ ಪ್ರಕರಣ ವರದಿ ಮಾಡುತ್ತಿದ್ದ ನಗರ

"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಹೆಚ್ಚಾಗಿದ್ದ ವೇಳೆಯಲ್ಲಿ ಇದೇ ಅನೇಕಲ್ ನಗರದಲ್ಲಿ ಪ್ರತಿನಿತ್ಯ 1300ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಅದೇ ಸಂಖ್ಯೆ ಇದೀಗ ಎರಡಂಕಿಗೆ ಬಂತು ತಲುಪಿದೆ. ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಜಿಗಣಿ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆಗಳಿಂದ ಪ್ರತಿನಿತ್ಯ 15000ಕ್ಕೂ ಹೆಚ್ಚು ಜನರು ಸಂಚರಿಸುತ್ತಾರೆ. ಹೊಸೂರಿನ ನಿವಾಸಿಗಳು ಕೂಡ ಅನೇಕಲ್ ನಗರದ ಕಾರ್ಖಾನೆಗಳಲ್ಲಿ ಉದ್ಯೋಗಕ್ಕಾಗಿ ಪ್ರಯಾಣಿಸುತ್ತಾರೆ," ಎಂದು ಬೆಂಗಳೂರು ನಗರ ಉಪ ಆಯುಕ್ತ ಜೆ ಮಂಜುನಾಥ್ ತಿಳಿಸಿದ್ದಾರೆ.

ಪ್ರತಿನಿತ್ಯ 10,000ಕ್ಕೂ ಹೆಚ್ಚು ಜನರಿಗೆ ಕೊವಿಡ್-19 ಪರೀಕ್ಷೆ

ಪ್ರತಿನಿತ್ಯ 10,000ಕ್ಕೂ ಹೆಚ್ಚು ಜನರಿಗೆ ಕೊವಿಡ್-19 ಪರೀಕ್ಷೆ

ಬೆಂಗಳೂರು ನಗರದ ಗಡಿ ಪ್ರದೇಶ ಮತ್ತು ಚೆಕ್ ಪೋಸ್ಟ್ ಕೈಗಾರಿಕಾ ಪ್ರದೇಶಗಳಲ್ಲಿ ಕೊರೊನಾವೈರಸ್ ಸೋಂಕು ಪರೀಕ್ಷೆಯಲ್ಲಿ ಹೆಚ್ಚಿಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರಗೆ ಪ್ರತಿನಿತ್ಯ 10,000ಕ್ಕೂ ಹೆಚ್ಚು ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನೇಕಲ್ ಭಾಗದಲ್ಲಿಯೇ ಪ್ರತಿದಿನ 3,000 ದಿಂದ 3500 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗುತ್ತದೆ. ಸೋಂಕಿತರು ಮತ್ತು ಸಂಪರ್ಕಿತರ ಮೇಲೆ ನಿಗಾ ವಹಿಸಲಾಗುತ್ತಿದೆ," ಎಂದು ಜೆ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ. ಈ ಪ್ರದೇಶದಲ್ಲಿ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಅಲ್ಲದೇ ಕೊವಿಡ್-19 ಆರೈಕೆ ಕೇಂದ್ರಗಳು ಎಂದಿನಂತೆ ಚಾಲ್ತಿಯಲ್ಲಿವೆ. ಬಿಬಿಎಂಪಿ ವ್ಯಾಪ್ತಿಯ ಹೊರಗೆ 11.5 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವಿಡ್-19 ಸೋಂಕಿತರ ಸಂಖ್ಯೆ ಏರಿಕೆಗೇನು ಕಾರಣ?

ಕೊವಿಡ್-19 ಸೋಂಕಿತರ ಸಂಖ್ಯೆ ಏರಿಕೆಗೇನು ಕಾರಣ?

ನೆಲಮಂಗಲದಲ್ಲಿ ಸಾರ್ವಜನಿಕರ ಓಡಾಟ ಮತ್ತು ಚಟುವಟಿಕೆಗಳೇ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಪ್ಪೇಸ್ವಾಮಿ ಹೇಳಿದ್ದಾರೆ. "ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 1ರಷ್ಟಿದೆ. ಜಿಲ್ಲೆಯಲ್ಲಿ ಪ್ರತಿನಿತ್ಯ 40 ಹೊಸ ಪ್ರಕರಣಗಳು ವರದಿಯಾದರೆ, ಈ ಪೈಕಿ ನೆಲಮಂಗಲದಲ್ಲಿ 10ಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿವೆ," ಎಂದಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಒಂದು ದಿನದಲ್ಲಿ 376 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1225957ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15843ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8176 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು

ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.03ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.24ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1531 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1430 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 19 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36456 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2899195ಕ್ಕೆ ಏರಿಕೆಯಾಗಿದೆ. ಒಟ್ಟು 2840147 ಸೋಂಕಿತರು ಗುಣಮುಖರಾಗಿದ್ದು. 22569 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ 18 ಅಪಾಯಕಾರಿ ನಗರಗಳ ಪಟ್ಟಿ ನೋಡಿ

ಕರ್ನಾಟಕದ 18 ಅಪಾಯಕಾರಿ ನಗರಗಳ ಪಟ್ಟಿ ನೋಡಿ

* ಉಡುಪಿ ಜಿಲ್ಲೆ ಕಾಪು, ಕಾರ್ಕಳ, ಕುಂದಾಪುರ, ಉಡುಪಿ ನಗರ

* ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು

* ಕೊಡಗಿನ ಸೋಮವಾರಪೇಟೆ

* ಹಾಸನದ ಸಕಲೇಶಪುರ

* ತುಮಕೂರಿನ ತಿಪಟೂರು

* ಮೈಸೂರಿನ ನಂಜನಗೂಡು

* ಬೆಳಗಾವಿಯ ನಿಪ್ಪಾಣಿ

* ವಿಜಯಪುರ

* ಗದಗ

* ಚಿತ್ರದುರ್ಗ

* ಉತ್ತರ ಕನ್ನಡದ ಅಕೋಲ

* ಮಂಡ್ಯ ಜಿಲ್ಲೆಯ ಮಳವಳ್ಳಿ

* ಚಾಮರಾಜನಗರ

* ಬಳ್ಳಾರಿ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 1531 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 7, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು 376, ಬೀದರ್ 2, ಚಾಮರಾಜನಗರ 29, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 51, ಚಿತ್ರದುರ್ಗ 18, ದಕ್ಷಿಣ ಕನ್ನಡ 337, ದಾವಣಗೆರೆ 15, ಧಾರವಾಡ 3, ಗದಗ 0, ಹಾಸನ 97, ಹಾವೇರಿ 2, ಕಲಬುರಗಿ 19, ಕೊಡಗು 78, ಕೋಲಾರ 9, ಕೊಪ್ಪಳ 0, ಮಂಡ್ಯ 38, ಮೈಸೂರು 93, ರಾಯಚೂರು 1, ರಾಮನಗರ 0, ಶಿವಮೊಗ್ಗ 86, ತುಮಕೂರು 39, ಉಡುಪಿ 109, ಉತ್ತರ ಕನ್ನಡ 57, ವಿಜಯಪುರ 4, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 29,795 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,18,524 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,48,319 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 70,51,141 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,11,65,767 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,82,16,908 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

Recommended Video

Congress ಪಕ್ಷ ಸೇರಿಕೊಂಡ ಮಧು ಬಂಗಾರಪ್ಪ | Siddaramaiah | DK Shivakumar | Hubli | Oneindia Kannada
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,58,808 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,38,902 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,14,280 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,27,668 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,18,45,387 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 49,26,987 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,33,27,848 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 62,32,224 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
Coronavirus Fear: Karnataka's Which 20 Cities Are Facing Worst Condition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X