• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ವೈರಸ್ ನಿಂದ ಮಹಿಳೆ ಸಾವು, ಎಂಟು ಮಂದಿಗೆ ಸೋಂಕು!

|

ಬೆಂಗಳೂರು, ಮೇ.07: ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ ಏರಿಕೆಯಾಗುತ್ತಿದ್ದು, ಗುರುವಾರ ಎಂಟು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693 ರಿಂದ 701ಕ್ಕೆ ಏರಿಕೆಯಾಗಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕಲಬುರಗಿ ಮತ್ತು ದಾವಣಗೆರೆಯಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದ್ದರೆ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಕೋವಿಡ್19: ಉಬರ್ ಸಂಸ್ಥೆಯಿಂದ 3,700 ಮಂದಿ ಉದ್ಯೋಗ ಕಡಿತ

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ತಲಾ ಒಂದು ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ಇನ್ನು, ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 71 ರಿಂದ 72ಕ್ಕೆ ಏರಿಕೆ ಕಂಡಿದೆ.

ದಾವಣಗೆರೆಯಲ್ಲಿ ಕೊರೊನಾಗೆ ಮಹಿಳೆ ಬಲಿ:

ನೊವೆಲ್ ಕೊರೊನಾ ವೈರಸ್ ಸೋಂಕಿಗೆ ಸಿಲುಕಿದ್ದ ದಾವಣಗೆರೆ ಮೂಲದ ಪೇಶೆಂಟ್ ನಂಬರ್.694 ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಡಯಾಬಿಟಿಸ್, ರಕ್ತದೊತ್ತಡ ಹಾಗೂ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 55 ವರ್ಷದ ಮಹಿಳೆ ದಾವಣಗೆರೆಯ ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಚಿಕಿತ್ಸೆ ಫಲಿಸದೇ ಪ್ರಾಣ ಬಿಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

English summary
Karnataka: 55 Years Old Women Death From Coronavirus, 8 New Positive Cases Found.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X