ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೊರೊನಾ; ಸಾರ್ವಜನಿಕ ಗ್ರಂಥಾಲಯ ಸೇವೆ ರದ್ದು
ಬೆಂಗಳೂರು, ಮಾರ್ಚ 23; ವಿಶ್ವವನ್ನೇ ತಲ್ಲಣಗೊಳಿಸಿರುವ ಕರೋನಾ ವೈರಾಣುಗಳು ಸಾರ್ವಜನಿಕ ಗ್ರಂಥಾಲಯಗಳಲ್ಲಿ ಪುಸ್ತಕ ಹಾಗೂ ನಿಯತಕಾಲಿಕೆಗಳ ಮೂಲಕ ಒಬ್ಬರಿಂದ ಹಲವರಿಗೆ ಹರಡುವ ಸಾಧ್ಯತೆಗಳಿರುವುದರಿಂದ ಸಾರ್ವಜನಿಕ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಮಾರ್ಚ್ 31 ರವರೆಗೆ ಸಂಪೂರ್ಣವಾಗಿ ಮುಚ್ಚಲು ಆದೇಶಿಸಲಾಗಿದೆ.
ಕರೋನಾ ವೈರಾಣು ಕಾಯಿಲೆ ಸ್ಫೋಟ ಮತ್ತು ಹರಡುವಿಕೆಯನ್ನು ತಡೆಗಟ್ಟಲು ಸಿಎಂ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಪುಸ್ತಕಗಳ ಎರವಲು ಮತ್ತು ಹಿಂಪಡೆಯುವ ಸೇವೆಗಳು ಸೇರಿದಂತೆ ಎಲ್ಲಾ ರೀತಿಯ ಸಾರ್ವಜನಿಕ ಸೇವೆಗಳನ್ನು ನಿರ್ಬಂಧಿಸಲಾಗಿದೆ.
ಈಗಾಗಲೇ ಸಾರ್ವಜನಿಕರಿಗೆ ಎರವಲು ನೀಡಿರುವ ಪುಸ್ತಕಗಳನ್ನು ಹಿಂತಿರುಗಿಸುವ ಅವಧಿ ಪೂರ್ಣವಾಗಿದ್ದರೂ ಸಹ ಅಂತಹ ಪುಸ್ತಕಗಳಿಗೆ ಈ ಅವಧಿಗೆ ಸಂಬಂಧಿಸಿದಂತೆ ಯಾವುದೇ ದಂಡ ವಿಧಿಸಲಾಗುವುದಿಲ್ಲ.
ಈ ಬಗ್ಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.