ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಭೀತಿ; ಇಡೀ ಕರ್ನಾಟಕ ಲಾಕ್‌ಡೌನ್ ಮಾಡಲು ಸಿಎಂ ಆದೇಶ

|
Google Oneindia Kannada News

ಬೆಂಗಳೂರು, ಮಾರ್ಚ್ 23: ಕಡೆಗೂ ರಾಜ್ಯ ಸರ್ಕಾರ ಕೊರೊನಾ ಹತ್ತಿಕ್ಕಲು ಇಡೀ ರಾಜ್ಯವನ್ನು ಲಾಕ್‌ಡೌನ್ ಮಾಡಲು ಆದೇಶಿಸಿದೆ. ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಆದೇಶ ಮಾಡಿದ್ದಾರೆ.

ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಇಲ್ಲದಿದ್ರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Coronavirus In Karnataka: LockDown Extended To Karnataka All District

ಕೊರೊನಾ ಕಂಡು ಬಂದ 9 ಜಿಲ್ಲೆಗಳಲ್ಲಿ ಮಾತ್ರ ಈ ಮೊದಲು ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಿಸಿತ್ತು. ಆದರೆ, ಕೊರೊನಾ ಗಂಭೀರತೆ ಅರಿತು ಲಾಕ್‌ಡೌನ್ ನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ. ಅತ್ಯಾವಶ್ಯಕ ಸೇವೆಗಳ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳ ಸ್ಥಗಿತಗೊಳ್ಳಲಿವೆ.

English summary
Coronavirus In Karnataka: LockDown Extended To Karnataka All District. cm yediyurappa orders it on monday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X