ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ವಿವಿಗಳಲ್ಲಿನ ವಿದೇಶಿ ವಿದ್ಯಾರ್ಥಿಗಳಿಗೆ ಸುರಕ್ಷಿತ ವ್ಯವಸ್ಥೆ: ಬಿ.ಸಿ. ಪಾಟೀಲ್

|
Google Oneindia Kannada News

ಬೆಂಗಳೂರು, ಮಾ. 23: ಕೊರೊನಾ ವೈರಸ್ ತಡೆಗಟ್ಟುವ ಮುಂಜಾಗ್ರತೆ ಕ್ರಮವಾಗಿ ರಾಜ್ಯದಲ್ಲಿನ ಎಲ್ಲ 4 ಕೃಷಿ ವಿಶ್ವಿವಿದ್ಯಾಲಯಗಳನ್ನು ಮುಚ್ಚಲು ಆದೇಶ ಮಾಡಿರುವ ಸರ್ಕಾರವೀಗ ಸಿಬ್ಬಂದಿಗೆ ವೇತನ ಸಹಿತ ರಜೆ ಘೋಷಣೆ ಮಾಡಿದೆ. ಇದೇ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಕೃಷಿಸಚಿವ ಬಿ.ಸಿ. ಪಾಟೀಲ್ ಅವರು, ಕೇಂದ್ರ ಸರ್ಕಾರ ಮಾರ್ಗಸೂಚಿ ಅನ್ವಯ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ.

ನಾಲ್ಕೂ ಕೃಷಿ ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗೆ ಮಾ. 23 ರಿಂದ ಮಾ‌. 31 ರವರೆಗೆ ರಜೆ ಕೊಡಲಾಗಿದೆ ಎಂದು ಹೇಳಿದ್ದಾರೆ.

Coronavirus: Paid leave for Staff of Agricultural Universities In State

ಈಗಾಗಲೇ ಮಾ‌. 14 ರಿಂದ 31ರವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ರಜಾ ಸಮಯದಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಶೋಧನೆಗೆ ಸಂಬಂಧಿಸಿದ ಸಂಶೋಧನ ಅಧ್ಯಯನ ಪಠ್ಯಕ್ರಮವನ್ನು ಆನ್‌ಲೈನ್ ಮೂಲಕ ಅಭಿವೃದ್ಧಿ ಪಡಿಸುವಂತೆ, ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪ್ರಶ್ನೆ ಬ್ಯಾಂಕ್ ತಯಾರಿಸಲು, ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಸುರಕ್ಷಿತ ವಸತಿ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.

English summary
Paid leave for staff of all agricultural universities in state to prevent coronavirus . Minister of Agriculture B.C. Patil has issued the directive as per the central government guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X