ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಳಿ ಮಾಂಸ, ಮೊಟ್ಟೆ ಸುರಕ್ಷಿತ: ಕೊರೊನಾ ಭೀತಿ ಬೇಡ ಪ್ರಭು ಚವ್ಹಾಣ್

|
Google Oneindia Kannada News

ಕೊರೊನಾ ವೈರಸ್ (covid19) ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ, ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ ಎಂದು ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವರು 'ನಮ್ಮ ದೇಶದಲ್ಲಿ ಕೋಳಿಗಳಿಗೆ ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ ಹಾಗೂ ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ' ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್: ಯಾವ ದೇಶದಲ್ಲಿ ಎಷ್ಟು ಪ್ರಕರಣ, ಎಷ್ಟು ಸಾವು? ಕೊರೊನಾ ವೈರಸ್: ಯಾವ ದೇಶದಲ್ಲಿ ಎಷ್ಟು ಪ್ರಕರಣ, ಎಷ್ಟು ಸಾವು?

Coronavirus Is Not Transmitted By Chicken

'ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕುಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ. ಸಾಮಾನ್ಯವಾಗಿ ಕೋಳಿ ಮಾಂಸವನ್ನು 100 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ್ಲ. ಆದ್ದರಿಂದ, ಸಾರ್ವಜನಿಕರು ಕೊರೊನಾ ವೈರಸ್ ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು' ಎಂದು ವಿನಂತಿಸಿದ್ದಾರೆ.

ಕೊರೊನಾ ಭೀತಿ: ಸಿಲಿಕಾನ್ ಸಿಟಿಯಲ್ಲಿ ದುಬಾರಿ ಆಯ್ತು ಮಾಸ್ಕ್ ಬೆಲೆ ಕೊರೊನಾ ಭೀತಿ: ಸಿಲಿಕಾನ್ ಸಿಟಿಯಲ್ಲಿ ದುಬಾರಿ ಆಯ್ತು ಮಾಸ್ಕ್ ಬೆಲೆ

Coronavirus Is Not Transmitted By Chicken

ಈ ರೀತಿಯ ವಂದತಿಗಳನ್ನು ಹರಡುವುದರಿಂದ ಸಾರ್ವಜನಿಕರಿಗೆ ಉತ್ತಮ ಪೌಷ್ಟಿಕಾಂಶ ನೀಡುವ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಯಿಂದ ದೊರಕುವ ಪೋಷಕಾಂಶಗಳ ಕೊರತೆ ಎದುರಾಗುತ್ತದೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಬಾಣಂತಿಯರು ಪೋಷಕಾಂಶ ಕೊರತೆಯಿಂದ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ವದಂತಿಗಳು ಸಾಮಾಜಿಕ ಆಹಾರ ಸ್ವಾಸ್ಥ್ಯವನ್ನು ಮತ್ತಷ್ಟು ಹದಗೆಡಿಸುತ್ತವೆ.

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಕೋಳಿ ಮಾಂಸ ಮತ್ತು ಮೊಟ್ಟೆ ದೇಹಕ್ಕೆ ಉತ್ತಮ ಪ್ರೋಟೀನ್ ಪೂರೈಸುವ ಆಹಾರವಾಗಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಜನರಲ್ಲಿ ಅರಿವು ಮೂಡಿಸಿದ್ದಾರೆ.

English summary
Coronavirus is not transmitted by chicken meat said Animal Husbandry, Hajj & wakf minister Prabhu chouhan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X