ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Corona Curfew: ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ!

|
Google Oneindia Kannada News

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Recommended Video

#Covid19Update : ದೇಶದಲ್ಲಿ 24 ಗಂಟೆಗಳಲ್ಲಿ 1,31,968 ಜನರಿಗೆ ಕೊರೊನಾ ಪಾಸಿಟಿವ್ | Oneindia Kannada

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗಿನ ಸಭೆ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಧಾನಿ ಸಲಹೆ ಮೇರೆಗೆ ರಾಜ್ಯದ 7 ಜಿಲ್ಲೆಗಳ 8 ನಗರಗಳಲ್ಲಿ ನೈಟ್ ಕರ್ಫ್ಯೂ ಅಂದರೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗುತ್ತದೆ.

ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೂ ರಾಜ್ಯದ 7 ಜಿಲ್ಲೆಯ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗುವುದು. ರಾತ್ರಿ ನಿಷೇಧಾಜ್ಞೆಯನ್ನೇ ಕೊರೊನಾ ಕರ್ಫ್ಯೂ ಎಂದು ಕರೆಯಲಾಗಿದ್ದು, ಶನಿವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆ ಎದುರಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?ಭಾರತದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ?

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ?

ರಾಜ್ಯದ 9 ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಕೊರೊನಾ ಕರ್ಫ್ಯೂ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಕಲಬುರ್ಗಿ, ತುಮಕೂರು, ಬೀದರ್, ಮಂಗಳೂರು, ಉಡುಪಿ ಮತ್ತು ಮಣಿಪಾಲ್ ನಗರಗಳಲ್ಲಿ ಕರ್ಫ್ಯೂ ಜಾರಿಗೆ ಬರಲಿದೆ. ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸದಿರಲು ಮುನ್ನೆಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ 4 ದಿನ ಕೊರೊನಾ ಲಸಿಕೆ ಉತ್ಸವ

ಕರ್ನಾಟಕದಲ್ಲಿ 4 ದಿನ ಕೊರೊನಾ ಲಸಿಕೆ ಉತ್ಸವ

ಕೊರೊನಾವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳಲು ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಲಸಿಕೆ ಉತ್ಸವ ನಡೆಸಲು ಸೂಚನೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಏಪ್ರಿಲ್ 11 ರಿಂದ ಏಪ್ರಿಲ್ 14ರವರೆಗೆ ರಾಜ್ಯದಲ್ಲೂ ಲಸಿಕೆ ಉತ್ಸವವನ್ನು ನಡೆಸಲಾಗುತ್ತದೆ. ನಾಲ್ಕು ದಿನಗಳಲ್ಲಿ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗುವುದು. 45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡರು.

ರಾಜ್ಯದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ

ರಾಜ್ಯದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾವೈರಸ್ ಸಾವಿನ ಭೀತಿ ಹುಟ್ಟು ಹಾಕುತ್ತಿದೆ. ಒಂದೇ ದಿನ 6570 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 2393 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 973949 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 36 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ 22 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 12767ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1040130 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 53395 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಜಿಲ್ಲಾವಾರು ಕೊವಿಡ್-19 ಪ್ರಕರಣಗಳು

ರಾಜ್ಯದಲ್ಲಿ ಜಿಲ್ಲಾವಾರು ಕೊವಿಡ್-19 ಪ್ರಕರಣಗಳು

ರಾಜ್ಯದಲ್ಲಿ ಒಟ್ಟು 6570 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 21, ಬಳ್ಳಾರಿ 126, ಬೆಳಗಾವಿ 92, ಬೆಂಗಳೂರು ಗ್ರಾಮಾಂತರ 54, ಬೆಂಗಳೂರು 4422, ಬೀದರ್ 129, ಚಾಮರಾಜನಗರ 56, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 40, ಚಿತ್ರದುರ್ಗ 24, ದಕ್ಷಿಣ ಕನ್ನಡ 145, ದಾವಣಗೆರೆ 28, ಧಾರವಾಡ 96, ಗದಗ 18, ಹಾಸನ 94, ಹಾವೇರಿ 15, ಕಲಬುರಗಿ 240, ಕೊಡಗು 19, ಕೋಲಾರ 60, ಕೊಪ್ಪಳ 27, ಮಂಡ್ಯ 29, ಮೈಸೂರು 216, ರಾಯಚೂರು 40, ರಾಮನಗರ 10, ಶಿವಮೊಗ್ಗ 70, ತುಮಕೂರು 183, ಉಡುಪಿ 63, ಉತ್ತರ ಕನ್ನಡ 142, ವಿಜಯಪುರ 60, ಯಾದಗಿರಿ 26 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

English summary
Coronavirus: Karnataka Govt Announces Night Curfew In 9 Districts, Says CM B S Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X