• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

|

ಬೆಂಗಳೂರು, ಮಾರ್ಚ್ 22: ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಸರ್ಕಾರ ಮುಂದೂಡಿದೆ. ಕೊರೊನಾ ಹರಡುವ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31ರ ತನಕ 9 ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾನುವಾರ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿದ ಬಗ್ಗೆ ಮಾಹಿತಿ ನೀಡಿದರು. "ಕೊರೊನಾ ಭೀತಿ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದ್ಯದಲ್ಲೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುತ್ತದೆ" ಎಂದರು.

ಮೂರು ದಿನ 15 ಜಿಲ್ಲೆಗಳು ಸ್ತಬ್ಧ; ಉತ್ತರ ಪ್ರದೇಶಕ್ಕೆ ಎಂಥಾ ಸ್ಥಿತಿ?

ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯದಲ್ಲಿ ನಡೆಯುತ್ತಿತ್ತು. ಅಂತಿಮ ವಿಷಯದ ಪರೀಕ್ಷೆ ಮಾತ್ರ ಮಾರ್ಚ್ 23ರ ಸೋಮವಾರ ನಡೆಯಬೇಕಿತ್ತು. ಈಗ ಅದನ್ನು ಮುಂದೂಡಲಾಗಿದೆ. ಈ ಕುರಿತು ಶಿಕ್ಷಣ ಸಚಿವರೇ ಹೇಳಿಕೆ ನೀಡಿದ್ದಾರೆ.

ಕೊರೊನಾ; ಆತಂಕಕಾರಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಭಾನುವಾರ ಬೆಳಗ್ಗೆ ಕೊರೊನಾ ನಿಯಂತ್ರಣ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದರು. ಮಾರ್ಚ್ 27ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡದಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಕರ್ನಾಟಕ ಸರ್ಕಾರ ಈಗಾಗಲೇ 1 ರಿಂದ 6ನೇ ತರಗತಿವರೆಗಿನ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕೊರೊನಾ ಹರಡದಂತೆ ತಡೆಯಲು ಕರ್ನಾಟಕ ಸರ್ಕಾರ 9 ಜಿಲ್ಲೆಗಳನ್ನು ಮಾರ್ಚ್ 31ರ ತನಕ ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಿದೆ. ಇದರಿಂದಾಗಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರಗಿ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರು, ಬೆಳಗಾವಿ, ಕೊಡಗು ಜಿಲ್ಲೆಗಳು ಮಾರ್ಚ್ 31ರ ತನಕ ಸಂಪೂರ್ಣ ಬಂದ್ ಆಗಲಿರಲಿದೆ.

ವೈದ್ಯಕೀಯ, ಔಷಧಿ, ದಿನಸಿ, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ವಾಣಿಜ್ಯ ಚಟುವಟಿಕೆಗಳನ್ನು ಮಾರ್ಚ್ 31ರ ತನಕ ನಿರ್ಬಂಧಿಸಲಾಗಿದೆ.

English summary
S. Suresh Kumar primary & secondary education minister of Karnataka said that due to corona outbreak 2nd PUC exam on 23rd March postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X